Breaking News

ಕಾರ್ಮಿಕರ ಕಿಟ್ ವಿತರಿಸಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ

Spread the love

ಚಿಕ್ಕೋಡಿ: ಗ್ರಾಮೀಣ ಭಾಗದಲ್ಲಿ ಮೂಲಸೌಕರ್ಯ ಒದಗಿಸಲು ಒತ್ತು ನೀಡುವುದರ ಜತೆಗೆ ಕಾರ್ಮಿಕರ ಕಲ್ಯಾಣ ಮತ್ತು ಕ್ಷೇಮಾಭಿವೃದ್ಧಿಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮ ಪಂಚಾಯತ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಕಾರ್ಮಿಕ ಇಲಾಖೆ ವತಿಯಿಂದ ಕಾರ್ಮಿಕ ಫಲಾನುಭವಿಗಳಿಗೆ ಕಿಟ್ ವಿತರಣೆ ಕಾರ್ಯಕ್ರಮ ಅವರು ಮಾತನಾಡಿದರು.
ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ಸರ್ಕಾರವು ಕಾರ್ಮಿಕರ ಸಾಮಾಜಿಕ ಮತ್ತು ಆರ್ಥಿಕ ಭದ್ರತೆಗಾಗಿ ಹಲವು ಯೋಜನೆ ಜಾರಿಗೆ ತಂದಿದೆ. ಕಾರ್ಮಿಕರು ಈ ಸೌಲಭ್ಯಗಳನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.
ಇದೇ ವೇಳೆ ಗ್ರಾಮದಲ್ಲಿ ೧ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ನೂತನ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ಕಾರ್ಮಿಕ ಇಲಾಖೆಯ ತಾಲೂಕು ಅಧಿಕಾರಿ ಮಹಾಂತೇಶ ಹಿರೇಮಠ,ಮುಖಂಡರಾದ ಈರಣ್ಣ ಬಿಸಿರೊಟ್ಟಿ, ಕಿರಣ ರಜಪೂತ,ಮಹಾಂತೇಶ ಮಗದುಮ್ಮ, ಓಂಕಾರï ತುಬಚಿ, ಶಂಕರ ತೆಗೂರಿ, ಶೇಖರ ಬಡಿಗೇರ, ಏಕನಾಥ ಬಡಿಗೇರ, ಅಭಿಜಿತ ಪಾಟೀಲ, ಶರೀಫ್ ಬೇಪಾರಿ, ಶಿವಶಂಕರ ಜುಟ್ಟಿ, ಶೌಕತ್ ಖಾಜಿ, ಗುಲಾಬ ರಜಪೂತ, ಮಹೇಶ ಬಡಿಗೇರ, ಈರಣ್ಣ ದಿನ್ನಿಮನಿ, ಪಿಡಿಒ ಆನಂದ ಹೊಳೆನ್ನವರ ಇತರರಿದ್ದರು.

Spread the love

About Laxminews 24x7

Check Also

ಅಂಗನವಾಡಿ ಕಾರ್ಯಕರ್ತೆಯರ ವೇತನ 4,000 ರೂ. ಹೆಚ್ಚಳ – 5 ಲಕ್ಷದವರೆಗೆ ಆರೋಗ್ಯ ಸೇವೆ; ಸಿಎಂ ಯೋಗಿ ಬಂಪರ್‌ ಗಿಫ್ಟ್‌!

Spread the loveಅಯೋಧ್ಯೆ: ಉತ್ತರ ಪ್ರದೇಶದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ಬಂಪರ್‌ ಗಿಫ್ಟ್‌ ಕೊಟ್ಟಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ