Breaking News

ಮದುವೆ ಕಾರ್ಯಕ್ರಮಗಳಿಗೆ ಷರತ್ತುಬದ್ಧ ಅನುಮತಿ …………

Spread the love

ನವದೆಹಲಿ: ದೇಶಾದ್ಯಂತ 2 ವಾರಗಳ ಕಾಲ ಲಾಕ್‍ಡೌನ್ ವಿಸ್ತರಣೆಯಾಗಿದೆ. ಆದರೆ ಕೇಂದ್ರ ಸರ್ಕಾರ ಗುರುತಿಸಿರುವ ಗ್ರೀನ್ ಝೋನ್ ಹಾಗೂ ಆರೆಂಜ್ ಝೋನ್‍ಗಳಲ್ಲಿ ಲಾಕ್‍ಡೌನ್‍ನಿಂದ ಕೆಲ ವಿನಾಯ್ತಿಗಳನ್ನು ನೀಡಲಾಗಿದೆ.

ಎಂಎಚ್‍ಎ ಆದೇಶ ಅನ್ವಯ ಮೇ.3ರ ಬಳಿಕವೂ 2 ವಾರ ಲಾಕ್‍ಡೌನ್ ಮುಂದುವರಿಯಲಿದೆ. ಆದರೆ ಹಸಿರು ವಲಯಗಳಲ್ಲಿ ಮದುವೆ ಸಮಾರಂಭಗಳಿಗೆ ಅವಕಾಶ ನೀಡಲಾಗಿದೆ. ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸುವುದು ಕಡ್ಡಾಯ ಹಾಗೂ ಸಮಾರಂಭದಲ್ಲಿ ಭಾಗವಹಿಸಲು ಕೇವಲ 50 ಜನರಿಗಷ್ಟೇ ಅವಕಾಶ ನೀಡಲಾಗಿದೆ.

ಅಂತ್ಯ ಸಂಸ್ಕಾರ ಹಾಗೂ ತಿಥಿ ಕಾರ್ಯಕ್ರಮಗಳಿಗೂ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದ್ದು, ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸುವುದು ಕಡ್ಡಾಯ ಹಾಗೂ ಸಮಾರಂಭದಲ್ಲಿ ಭಾಗವಹಿಸಲು ಕೇವಲ 20 ಜನರಿಗಷ್ಟೇ ಅವಕಾಶ ನೀಡಲಾಗಿದೆ. ಆದರೆ ರಾಜಕೀಯ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಯಾವ ವಲಯದಲ್ಲೂ ಮಾಡುವಂತಿಲ್ಲ ಎಂಬ ನಿಯಮ ಜಾರಿಯಾಗಿದೆ.

ಗುಡ್ ನ್ಯೂಸ್: ಸವಿತಾ ಸಮಾಜದವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಗ್ರೀನ್ ಹಾಗೂ ಆರೆಂಜ್ ಝೋನ್‍ಗಳಲ್ಲಿ ಸೆಲೂನ್ ಮತ್ತು ಸ್ಪಾ ತೆರೆಯಲು ಅನುಮತಿ ನೀಡಿದೆ. ಆದರೆ ರೆಡ್ ಹಾಗೂ ಕಂಟೈನ್ಮೆಂಟ್ ಝೋನ್‍ಗಳಲ್ಲಿ ಇವುಗಳಿಗೆ ನಿರ್ಬಂಧ ವಿಧಿಸಿದೆ.


Spread the love

About Laxminews 24x7

Check Also

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಹಾರಾಟ ಕಡಿಮೆ: ರಾಜ್ಯಸಭೆಯಲ್ಲಿ ಸಂಸದ ಈರಣ್ಣ ಕಡಾಡಿ ಆಕ್ರೋಶ

Spread the loveನವದೆಹಲಿ: ಕರ್ನಾಟಕದ ಎರಡನೇ ರಾಜಧಾನಿ ಎಂದೇ ಖ್ಯಾತವಾದ ಬೆಳಗಾವಿ  ನಗರವು ಶಿಕ್ಷಣ, ಉದ್ಯಮ ಹಾಗೂ ರಕ್ಷಣಾ ಕ್ಷೇತ್ರಗಳಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ