Breaking News

ನಾನಾ ಪಾಟೇಕರ್ ಅವರ ಪಾರ್ಥಿವ ಶರೀರಕ್ಕೆ ಮೃಣಾಲ್ ಹೆಬ್ಬಾಳ್ಕರ್ ಅಂತಿಮ ನಮನ

Spread the love

ಗೋವಾ: ಖ್ಯಾತ ನಟ, ಹಿರಿಯ ಕಲಾವಿದ ದಿವಂಗತ ನಾನಾ ಪಾಟೇಕರ್ ಅವರ ಪಾರ್ಥಿವ ಶರೀರಕ್ಕೆ ಬೆಳಗಾವಿಯ ಯುವ ಕಾಂಗ್ರೆಸ್ ನಾಯಕ ಮೃಣಾಲ್ ಹೆಬ್ಬಾಳ್ಕರ್ ಅವರು ಅಂತಿಮ ನಮನ ಸಲ್ಲಿಸಿ, ಗೌರವ ಅರ್ಪಿಸಿದರು.
ಗೋವಾದಲ್ಲಿ ಸಾರ್ವಜನಿಕ ದರ್ಶನಕ್ಕಾಗಿ ಇರಿಸಲಾಗಿದ್ದ ನಾನಾ ಪಾಟೇಕರ್ ಅವರ ಪಾರ್ಥಿವ ಶರೀರದ ದರ್ಶನ ಪಡೆದ ಮೃಣಾಲ್ ಹೆಬ್ಬಾಳ್ಕರ್ ಅವರು, ಅಗಲಿದ ಹಿರಿಯ ಕಲಾವಿದರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.
ನಂತರ ನಾನಾ ಪಾಟೇಕರ್ ಅವರ ಪುತ್ರ ಮಲ್ಹಾರ್ ಪಾಟೇಕರ್ ಹಾಗೂ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ನಾನಾ ಪಾಟೇಕರ್ ಅವರ ನಿಧನದಿಂದ ಭಾರತೀಯ ಚಿತ್ರರಂಗಕ್ಕೆ, ವಿಶೇಷವಾಗಿ ಅವರ ಅಭಿಮಾನಿಗಳಿಗೆ ಅಪಾರ ನಷ್ಟವಾಗಿದೆ ಎಂದು ಅವರು ಸಂತಾಪ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಗೋವಾ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗಿರೀಶ್ ಚೋಡಣ್ಕರ್, ಯುರಿ ಅಲೆಮಾವೊ, ನಿಶಾಂತ್ ಆನಂದ್, ಅರ್ಚಿತ್ ನಾಯಕ್ ಹಾಗೂ ವರದಾ ಮರಾಸೋಲ್ಕರ್ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಅಂಬಾರಿ ತೂಕ ತಡೆಯಲಾಗದೇ ತಾಲೀಮು ಅರ್ಧಕ್ಕೆ ಮೊಟಕು – ಬಹುತೇಕ ಕ್ಯಾಪ್ಟನ್ ರೇಸ್‌ನಿಂದ ಮಹೇಂದ್ರ ಔಟ್

Spread the loveಮೈಸೂರು: ಈ ಬಾರಿ ದಸರಾದಲ್ಲಿ  ಅಂಬಾರಿ ಹೊರುವ ಆನೆ ಯಾವುದು ಅನ್ನೋದು ಇನ್ನೂ ಕುತೂಹಲವಾಗಿಯೇ ಇದೆ. ಇದರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ