Breaking News

ಆರೋಗ್ಯಾಧಿಕಾರಿ ಆತ್ಮಹತ್ಯೆ: ಜಿಪಂ ಸಿಇಓ ಅಮಾನತಿಗೆ ಆಗ್ರಹಿಸಿ ವೈದ್ಯರ ಪ್ರತಿಭಟನೆ

Spread the love

ಮೈಸೂರು: ಮೈಸೂರು ಜಿಲ್ಲಾ ಪಂಚಾಯಿತಿ ಸಿಇಓ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ಕರ್ತವ್ಯದಿಂದ ಕೂಡಲೇ ವಜಾಗೊಳಿಸುವಂತೆ ಆಗ್ರಹಿಸಿ ಮೈಸೂರಿನಲ್ಲಿ ವೈದ್ಯರ ಪ್ರತಿಭಟನೆ ಮುಂದುವರಿದಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಮೃತರ ಕುಟುಂಬಕ್ಕೆ 50 ಲಕ್ಷ ರು ಪರಿಹಾರ ನೀಡಿ ತನಿಖೆಗೆ ಆದೇಶಿಸಿದ್ದಾರೆ. ಆದರೆ ಇದಕ್ಕೆ ವೈದ್ಯರ ಸಂಘ ತೃಪ್ತಿಯಾಗಿಲ್ಲ, ಕೂಡಲೇ ಸಿಇಓ ಮಿಶ್ರಾ ಅವರನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ವೈದ್ಯರು ನಡೆಸುತ್ತಿರುವ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಮಂಡ್ಯ ಮತ್ತು ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯ ವೈದ್ಯರು ಸಹ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.

ಜಿಲ್ಲೆಯ ಪ್ರಕರಣದ ವಿವರಗಳನ್ನು ಸಂಗ್ರಹಿಸುವ, ಅಪ್ಲೋಡ್ ಮಾಡುವ ಮತ್ತು ನವೀಕರಿಸುವ ಕೋವಿಡ್ ಯುದ್ಧ ಕೊಠಡಿಗಳನ್ನು ಮುಚ್ಚಿ ಕೆಲಸಕ್ಕೆ ಹಾಜರಾಗದೇ ಪ್ರತಿಭಟನೆ ಮುಂದುವರಿಸಿದ್ದಾರೆ.

ಶಾಸಕ ಎಸ್ ಎ ರಾಮದಾಸ್ ಮತ್ತು ಸಚಿವ ಎಸ್ ಟಿ ಸೋಮಶೇಖರ್ ಎಲ್ ನಾಗೇಂದ್ರ ಅವರ ಪಾರ್ಥೀವ ಶರೀರದ ದರ್ಶನ ಪಡೆದು ಸಂತಾಪ ಸೂಚಿಸಿದರು.

ಕೆಲಸಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳನ್ನು ಅವರು ಎದುರಿಸಿದರೆ, ನಾವು ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಹೀಗಾಗಿ ವೈದ್ಯರು ಮರಳಿ ಕೆಲಸಕ್ಕೆ ಹಾಜರಾಗಬೇಕೆಂದು ಸೋಮಶೇಖರ್ ವಿನಂತಿಸಿಕೊಂಡಿದ್ದಾರೆ. ಆದರೆ ಮಿಶ್ರಾ ಅವರನ್ನು ಕೂಡಲೇ ಅಮಾನತುಗೊಳಿಸದಿದ್ದರೇ ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ವೈದ್ಯರು ಹೇಳಿದ್ದಾರೆ. ನಾನು ವಿನಂತಿಸುತ್ತೇನೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ