Breaking News

ಮತದಾನ ಮಾಡಿದ ಅಭ್ಯರ್ಥಿ ಭಿಕ್ಷುಕ ಅಂಕ ನಾಯಕ : ಗೆಲುವಿನ ವಿಶ್ವಾಸ

Spread the love

ಮೈಸೂರು : ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಬೊಕ್ಕಹಳ್ಳಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಚುನಾವಣಾ ಕಣಕ್ಕೆ ಇಳಿಸಿದರುವ ಭಿಕ್ಷುಕ ಅಂಕ ನಾಯಕ ಮತದಾನ ಮಾಡಿದರು. ಅಂಕ ನಾಯಕ ಗೆಲುವಿನ ವಿಶ್ವಾಸದಲ್ಲಿದ್ದಾರೆ.

ಗ್ರಾಮ ಪಂಚಾಯಿತಿ ಬ್ಲಾಕ್ ನಂ.1ರಲ್ಲಿ ಭಾನುವಾರ ಮತದಾನ ಮಾಡಿದರು. ಬಳಿಕ ಮಾತನಾಡಿದ ಅವರು, “ಗ್ರಾಮದ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಹೀಗಾಗಿ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತೇನೆ ಎಂಬ ವಿಶ್ವಾಸ ವಿದೆ” ಎಂದರು.

ಈ ಹಿಂದೆ ಗ್ರಾಪಂ.ಸದಸ್ಯರು ಯಾವುದೇ ಮೂಲ ಸೌಕರ್ಯ ಕಲ್ಪಿಸಿರಲಿಲ್ಲ. ಇದರಿಂದ ಆಕ್ರೋಶಗೊಂಡ ಗ್ರಾಮದ ಜನರು ಭಿಕ್ಷುಕ ಅಂಕ ನಾಯಕನನ್ನು ಚುನಾವಣಾ ಕಣಕ್ಕಿಳಿಸಿದ್ದಾರೆ. ಅವರ ಪರವಾಗಿ ಪ್ರಚಾರ ನಡೆಸಿದ್ದರು.

ಅವಿವಾಹಿತ ಅಂಕ ನಾಯಕ ಕ್ಯಾಮರಾ ಚಿಹ್ನೆಯನ್ನಾಗಿ ತೆಗೆದುಕೊಂಡಿದ್ದಾರೆ. ಗ್ರಾಮದ ಯುವಕರೆಲ್ಲರೂ ಅಂಕ ನಾಯಕನ ಬೆಂಬಲಕ್ಕಿದ್ದಾರೆ.


Spread the love

About Laxminews 24x7

Check Also

ಹೋಟೆಲ್‌ಗಳಿಗೆ 10 ದಿನ ಗ್ಯಾಸ್ ಸಮಸ್ಯೆ ಆಗುತ್ತೆ, ಸಹಿಸಿಕೊಳ್ಳಬೇಕು: ಮುನಿಯಪ್ಪ

Spread the loveಬೆಂಗಳೂರು: ಹೋಟೆಲ್‌ಗಳಿಗೆ ಕಮರ್ಷಿಯಲ್ ಗ್ಯಾಸ್ ಒಂದು ವಾರ, 10 ದಿನ ಸಮಸ್ಯೆ ಆಗಬಹುದು. ಅಲ್ಲಿವರೆಗೂ ಹೋಟೆಲ್‌ಗಳು ಸಹಿಸಿಕೊಳ್ಳಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ