Breaking News
Home / ರಾಷ್ಟ್ರೀಯ / ಬಹುಭಾಷಾ ನಟ ಮುರಳಿ ಶರ್ಮಾಗೆ ಮಾತೃ ವಿಯೋಗ………….

ಬಹುಭಾಷಾ ನಟ ಮುರಳಿ ಶರ್ಮಾಗೆ ಮಾತೃ ವಿಯೋಗ………….

Spread the love

ಮುಂಬೈ: ತೆಲುಗು, ತಮಿಳು, ಹಿಂದಿ ಮತ್ತು ಮರಾಠಿ ಭಾಷೆಗಳಲ್ಲಿ ನಟಿಸಿ ಖ್ಯಾತಿ ಪಡೆದಿರುವ ನಟ ಮುರಳಿ ಶರ್ಮಾ ಅವರ ತಾಯಿ ಸೋಮವಾರ ನಿಧನರಾಗಿದ್ದಾರೆ.

ಪದ್ಮಾ ಶರ್ಮಾ (76) ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಮುರಳಿ ಶರ್ಮಾ ತಾಯಿ ಮುಂಬೈನಲ್ಲಿ ನೆಲೆಸಿದ್ದು, ಅವರ ಸ್ವ-ಗೃಹದಲ್ಲೇ ಕೊನೆಯುಸಿರೆಳೆದರು. ಕಳೆದ ವರ್ಷ ಮುರಳಿ ಅವರ ತಂದೆ ವೃಜ್‍ಭೂಷಣ್ ಶರ್ಮಾ ನಿಧನರಾಗಿದ್ದರು. ಈಗ ತಾಯಿಯೂ ಕೂಡ ವಿಧಿವಶರಾಗಿದ್ದಾರೆ.

ಟಾಲಿವುಡ್ ಮತ್ತು ಬಾಲಿವುಡ್‍ನಲ್ಲಿ ತಮ್ಮ ವಿಭಿನ್ನ ಅಭಿನಯದ ಮೂಲಕವೇ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಮುರಳಿ ಶರ್ಮಾ ಅವರು ನಟ, ಪೋಷಕ ನಟ ಮತ್ತು ಖಳನಟನಾಗಿಯೂ ಅಭಿನಯಿಸಿದ್ದಾರೆ. ಇತ್ತೀಚೆಗೆ ಬಿಡುಗಡೆಯಾಗಿ ಯಶಸ್ವಿಯಾಗಿದ್ದ ‘ಅಲಾ ವೈಕುಂಟಪುರಂಲೋ’ ಸಿನಿಮಾದಲ್ಲೂ ನಟಿಸಿದ್ದಾರೆ.

ಮುರಳಿ ಶರ್ಮಾ ‘ದಿಲ್ ವಿಲ್ ಪ್ಯಾರ್ ವ್ಯಾರ್’ ಸಿನಿಮಾದ ಮೂಲಕ ಬಾಲಿವುಡ್‍ಗೆ ಎಂಟ್ರಿ ಕೊಟ್ಟಿದ್ದರು. ನಂತರ ಮೇನ್ ಹೂ ನಾ, ಎಬಿಸಿಡಿ 2, ಬದ್ಲಾಪುರ್, ಧಮಾಲ್, ಬೇಬಿ, ಗೋಲ್‍ಮಾಲ್ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

 


Spread the love

About Laxminews 24x7

Check Also

ಕೆ.ಆರ್.ಎಸ್. ಅಣೆಕಟ್ಟಿಗೆ ಕಿಂಚಿತ್ತೂ ಧಕ್ಕೆಯಾಗದಂತೆ ನೋಡಿಕೊಳ್ಳಬೇಕಿದೆ ಎಂದ ಹೈಕೋರ್ಟ್

Spread the loveಬೆಂಗಳೂರು: ಕೆ.ಆರ್.ಎಸ್. ಅಣೆಕಟ್ಟಿನ ಸುತ್ತಮುತ್ತ ಪ್ರದೇಶದಲ್ಲಿ ಯಾವುದೇ ರೀತಿಯ ಗಣಿಗಾರಿಕೆ ಮತ್ತು ಸಂಬಂಧಿತ ಚಟುವಟಿಕೆಗಳಿಗೆ ಅವಕಾಶ ನೀಡುವ ಕುರಿತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ