Breaking News

ದಂಡುಪಾಳ್ಯ ರೀತಿಯಲ್ಲಿ ಕೊಲೆ ನಡೆದಿದೆ..ಎಲ್ಲಿ ಗೊತ್ತಾ?

Spread the love

ಮಂಡ್ಯ: ಮಹಿಳೆಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.ಜಿಲ್ಲೆಯ ಶ್ರೀರಂಗಪಟ್ಟಣದ ಲಾಡ್ಜ್ ನಲ್ಲಿ ಘಟನೆ ನಡೆದಿದ್ದು, ಮಹಿಳೆಯ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಮಂಗಳವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಜೋಡಿಯೊಂದು ಲಾಡ್ಜ್ ಗೆ ಆಗಮಿಸಿದೆ. ರಾತ್ರಿ ವೇಳೆಗೆ ಮಹಿಳೆಯನ್ನು ಕೊಲೆ ಮಾಡಿ ಆರೋಪಿ ಪರಾರಿಯಾಗಿದ್ದಾನೆ.

ಜೋಡಿ ಇದ್ದ ರೂಮ್‍ನಿಂದ ರಕ್ತ ಹೊರ ಬರುತ್ತಿದ್ದದನ್ನು ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಮಹಿಳೆಯ ಕತ್ತು ಕೊಯ್ದು ಚಾಕು ಸ್ಥಳದಲ್ಲೇ ಬಿಟ್ಟು ಆರೋಪಿ ಪರಾರಿಯಾಗಿದ್ದಾನೆ ಎಂದು ಶಂಕಿಸಲಾಗಿದೆ. ಭೀಕರ ಕೊಲೆ ನಡೆದ ಘಟನೆಯಿಂದ ಶ್ರೀರಂಗಪಟ್ಟಣ ಜನತೆ ಬೆಚ್ಚಿ ಬಿದ್ದಿದ್ದಾರೆ. ಪ್ರಕರಣ ಸಂಬಂಧ ಶ್ರೀರಂಗಪಟ್ಟಣ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


Spread the love

About Laxminews 24x7

Check Also

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ನಾಲ್ವರು ಕಾಮುಕರಿಗೆ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯದ ಐತಿಹಾಸಿಕ ತೀರ್ಪು

Spread the love ಬೆಳಗಾವಿ ನಗರವನ್ನು ಬೆಚ್ಚಿಬೀಳಿಸಿದ್ದ ಅಪ್ರಾಪ್ತ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ತೀರ್ಪು ಇಂದು ಪ್ರಕಟವಾಗಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ