Breaking News

ಕಾಂಗ್ರೆಸ್ ಸರ್ಕಾರ ಗೊಂದಲ ಬಿಟ್ಟು ಸೂಕ್ತ ಆಡಳಿತ ನಡೆಸಲಿ: ಮುರುಗೇಶ್ ನಿರಾಣಿ

Spread the love

ಕಲಬುರಗಿ: ಕಾಂಗ್ರೆಸ್ ಸರ್ಕಾರ ಗೊಂದಲ ಬಿಟ್ಟು ಸೂಕ್ತ ಆಡಳಿತ ನಡೆಸಲಿ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ.

ರಾಜ್ಯ ಸರ್ಕಾರದಲ್ಲಿ ಕಳೆದೊಂದು ವರ್ಷದಲ್ಲಿ ಬರೀ ಗೊಂದಲ ಇದೆ. ಸಿಎಂ ಸಿದ್ದರಾಮಯ್ಯ ಅನುಭವಸ್ಥರು. ಆದಷ್ಟು ಬೇಗ ಗೊಂದಲ ಬಗೆಹರಿಸಿ ಅಭಿವೃದ್ಧಿಯತ್ತ ಚಿತ್ತ ಹರಿಸಬೇಕು ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

31 ಹೊಸ ಕಾಂಗ್ರೆಸ್ ಶಾಸಕರು ಹೈಕಮಾಂಡ್ ಪತ್ರ ವಿಚಾರ ಪತ್ರ ಬರೆದಿದ್ದರಲ್ಲಿ ತಪ್ಪೇನಿಲ್ಲ. ಸಿದ್ದರಾಮಯ್ಯ ಸರ್ಕಾರಕ್ಕೆ ಪೂರ್ಣ ಬಹುಮತವಿದೆ. ಹೀಗಾಗಿ, ಗೊಂದಲ ಬಿಟ್ಟು ಸೂಕ್ತವಾಗಿ ಆಡಳಿತ ನಡೆಸಬೇಕು. ಡಿಕೆಶಿ ದೆಹಲಿಗೆ ಹೋಗ್ತಾರೆ, ಬರ್ತಾರೆ. ಅವರಲ್ಲಿ ಯಾರಾದ್ರು ಸಿಎಂ ಆಗಲಿ. ಮೊದಲು ಗೊಂದ ಬಗೆಹರಿಸಲಿ ಎಂದ ನಿರಾಣಿ ಸರ್ಕಾರಕ್ಕೆ ಕಿವಿ ಮಾತಿ ಹೇಳಿದ್ದಾರೆ.

ಇನ್ನು, ಗುಲ್ಬರ್ಗಾ ವಿವಿ ನನಗೆ ಗೌರವ ಡಾಕ್ಟರೇಟ್ ನೀಡಿದೆ. ಅದಕ್ಕಾಗಿ ರಾಜ್ಯಪಾಲರು ಹಾಗೂ ಉಪಕುಲಪತಿಗಳಿಗೆ ಧನ್ಯವಾದ ಅಂತಾ ನೀರಾಣಿ ಹೇಳಿದ್ದಾರೆ.


Spread the love

About Laxminews 24x7

Check Also

ಹಳ್ಳಿಯಲ್ಲಿ ವಾಸಿಸಲು ಇಷ್ಟವಿಲ್ಲವೆಂದು ನವ ವಿವಾಹಿತೆ ಆತ್ಮಹತ್ಯೆ..!

Spread the loveಕಲಬುರಗಿ: ಪ್ರೀತಿಸಿ ಮದುವೆಯಾದ ನವ ವಿವಾಹಿತೆ ಎರಡೇ ತಿಂಗಳಲ್ಲಿ ನೇಣಿಗೆ ಶರಣಾದ ಘಟನೆ ನಗರದ ಸಿದ್ದೇಶ್ವರ ಕಾಲೋನಿಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ