Breaking News

ಕೆಲಸ ಮುಗಿಸಿ ಬರುವಾಗ ಸಿಡಿಲು ಬಡಿದು ರೈತ ಸಾವು

Spread the love

ಗದಗ: ಸಿಡಿಲು ಬಡಿದು ರೈತ ಸಾವನ್ನಪ್ಪಿರುವ ಘಟನೆ ಗದಗ  ಜಿಲ್ಲೆಯ ರೋಣ  ತಾಲೂಕಿನ ಮೆಣಸಗಿ ಗ್ರಾಮದಲ್ಲಿ ನಡೆದಿದೆ.

58 ವರ್ಷದ ನಿಂಗಪ್ಪ ಅಮಾತ್ಯ ಮೃತ ರೈತ ಎಂದು ಗುರುತಿಸಲಾಗಿದ್ದು, ಜಮೀನಿನಲ್ಲಿ ಕೆಲಸಕ್ಕೆ ಹೋಗಿದ್ದಾಗ ಈ ಅವಘಡ ಸಂಭವಿಸಿದೆ.

ಮೃತ ವ್ಯಕ್ತಿ ಬೆಣ್ಣೆಹಳ್ಳ ಸಮೀಪದ ಜಮೀನಿನಲ್ಲಿ ಕೆಲಸಕ್ಕೆ ಹೋಗಿದ್ದರು. ಮಳೆ ಆರಂಭವಾಗುತ್ತಿದ್ದAತೆ ಕೆಲಸ ಮುಗಿಸಿಕೊಂಡು ಮನೆಗೆ ಬರುವ ವೇಳೆ ಸಿಡಿಲು ಬಡಿದಿದ್ದು, ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ರೋಣ ತಾಲೂಕಿನ ಹಲವೆಡೆ ಆಲಿಕಲ್ಲು, ಗುಡುಗು, ಸಿಡಿಲು ಸಹಿತ ಬಿರುಗಾಳಿ ಮಳೆಯಾಗಿದೆ.

ಬಿರುಗಾಳಿ ಮಳೆಗೆ ಅನೇಕ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ವರ್ಷಧಾರೆಗೆ ಜಿಲ್ಲೆಯಲ್ಲಿ ರೈತ ಮೃತಪಟ್ಟಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗದಗ ಜಿಲ್ಲೆ ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಅವಳಿ ಮಕ್ಕಳ ಜೊತೆ ಬಾವಿಗೆ ಹಾರಿದ ತಾಯಿ: ಮಹಿಳೆಯ ರಕ್ಷಣೆ, ಪುಣಾಣಿಗಳು ಸಾವು

Spread the loveಗದಗ: ಕೌಟುಂಬಿಕ ಕಲಹ ಹಿನ್ನೆಲೆ ಇಬ್ಬರು ಮಕ್ಕಳ ಜೊತೆ ತಾಯಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ