Breaking News

ನನ್ನ ರಾಜಕೀಯ ಜೀವನ ಬೆಳವಣಿಗೆಗೆ ಅನೇಕ ಹಿರಿಯರ ಆಶೀರ್ವಾದವಿದೆ: ಸಚಿವ ಕೆ.ಎಚ್.ಮುನಿಯಪ್ಪ

Spread the love

ದೇವನಹಳ್ಳಿ: ನಾನು ನನ್ನ ರಾಜಕೀಯ ಜೀವನದಲ್ಲಿ ಕೇಂದ್ರ ಮತ್ತು ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ, ಸಚಿವನಾಗಲು ಅನೇಕ ನಾಯಕರ ಸಹಕಾರ, ಆಶೀರ್ವಾದ ನನ್ನ ಮೇಲಿದ್ದು, ಅವರನ್ನು ನಾನು ಪ್ರತಿದಿನ ಸ್ಮರಿಸತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ಪಟ್ಟಣದ ಸರ್ಕಾರಿ ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಆಯೋಜಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪನವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚುನಾವಣೆ 10 ದಿನ ಇರುವಾಗ ನಾನು ದೇವನಹಳ್ಳಿಗೆ ಬಂದಾಗ ತಾಲೂಕಿನ ಜನತೆ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ನನಗಾಗಿ ಶ್ರಮಿಸಿ ನನ್ನನ್ನು ಗೆಲ್ಲಿಸಿದ್ದಾರೆ. ತಾಲೂಕಿನ ಜನತೆಗೆ ನಾನು ಅಭಾರಿಯಾಗಿದ್ದೇನೆ. ತಾಲೂಕಿನ ಸಮಗ್ರ ಅಭಿವೃದ್ಧಿಗೆ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇನೆ. ಇರುವ ಅವಧಿಯಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿ ತಾಲೂಕಿನ ಜನತೆಯ ಖುಣ ತೀರಿಸುತ್ತೇನೆ ಎಂದು ಹೇಳಿದರು.

ಶ್ರೀ ನಿರ್ಮಲಾನಂದ ಸ್ವಾಮೀಜಿಯವರು ಸಮಾಜದಲ್ಲಿ ದೊಡ್ಡಹೆಸರು ಪಡೆದವರು. ಆದಿಚುಂಚನಗಿರಿ ಮಠದಲ್ಲಿ ಎಲ್ಲಾ ವರ್ಗದವರಿಗೂ ದಾಸೋಹ, ಶಿಕ್ಷಣ ನೀಡುತ್ತಿದ್ದಾರೆ. 1.75 ಲಕ್ಷ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿ ಬದುಕು ಕಟ್ಟಿಕೊಳ್ಳಲು ನೆರವಾಗಿರುವ ಏಕೈಕ ಸಂಸ್ಥೆ ಆದಿಚುಂಚನಗಿರಿ ಮಠ. ಎಲ್ಲಾ ಸಮಾಜಗಳನ್ನು ಒಗ್ಗೂಡಿಸಿಕೊಂಡು ಬಸವಣ್ಣನವರ ಚಿಂತನೆಯನ್ನು ಪಾಲಿಸುತ್ತಿದ್ದಾರೆ ಎಂದು ಹೇಳಿದರು.


Spread the love

About Laxminews 24x7

Check Also

ಸಿಸಿಬಿ ಪೊಲೀಸರ ಮೆಗಾ ರೇಡ್​​: ಪ್ರತಿಷ್ಠಿತ ಅಪಾರ್ಟ್​ಮೆಂಟ್​ನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್​​ ಸೀಜ್​

Spread the loveಬೆಂಗಳೂರು: ಡ್ರಗ್ಸ್​​ ದಂಧೆಕೋರರಿಗೆ ಬೆಂಗಳೂರು ಪೊಲೀಸರು ಭರ್ಜರಿ ಶಾಕ್​​ ಕೊಟ್ಟಿದ್ದಾರೆ. ನಗರದ ಪ್ರತಿಷ್ಠಿತ ಅಪಾರ್ಟ್​ಮೆಂಟ್​ನಲ್ಲಿ ಡ್ರಗ್ಸ್ ಪತ್ತೆ ಮಾಡಲಾಗಿದ್ದು, ಬರೋಬ್ಬರಿ 10 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ