Breaking News

ರಾತ್ರಿ ಪಾರ್ಟಿ ಬೆನ್ನಲ್ಲೇ ಮನೆಯಲ್ಲಿ ಬೆಂಕಿ: 5 ವರ್ಷದ ಮಗ-ಸ್ನೇಹಿತ ಸಾವು, ಕೊಲೆ ಶಂಕೆ

Spread the love

ಮೈಸೂರು: ಮನೆಯಲ್ಲಿ ಬೆಂಕಿ ಹೊತ್ತಿಕೊಂಡು ಮಗು ಹಾಗೂ ಓರ್ವ ವ್ಯಕ್ತಿ ಸಜೀವವಾಗಿ ದಹನವಾಗಿರುವ ಘಟನೆ ನಾಗಮಂಗಲ ತಾಲೂಕಿನ ಬೆಳ್ಳೂರು ಸಮೀಪದ ಅಗಚಹಳ್ಳಿಯಲ್ಲಿ ನಡೆದಿದೆ. ತನ್ವೀತ್​(5) ಹಾಗು ದೀಪಕ್​ ಮೃತ ದುರ್ದೈವಿಗಳು.

ಕಳಸ ಮೂಲದ ಪೇಂಟರ್​ ಭರತ್​ ಮೈಸೂರಲ್ಲಿ​ ಬಾಡಿಗೆ ಮನೆ ಮಾಡಿಕೊಂಡು ಪುತ್ರ ತನ್ವಿತ್ ಜೊತೆ ವಾಸವಾಗಿದ್ದರು. ನಿನ್ನೆ ರಾತ್ರಿ ಮನೆಯಲ್ಲಿ ಭರತ್​​ ಎಣ್ಣೆ ಪಾರ್ಟಿ ಆಯೋಜಿಸಿದ್ದರು. ಸ್ನೇಹಿತರೆಲ್ಲ ರಾತ್ರಿ ಪೂರ ವಿಪರೀತ ಮದ್ಯಪಾನ ಮಾಡಿದ್ದರು. ಬಳಿಕ ಭರತ್​ನ ಒಬ್ಬ ಸ್ನೇಹಿತ ಮನೆಗೆ ಬೀಗ ಹಾಕಿ ಅಲ್ಲಿಂದ ವಾಪಸ್ಸಾಗಿದ್ದರು ಎನ್ನಲಾಗಿದೆ.

ಮತ್ತೋರ್ವ ಸ್ನೇಹಿತ ದೀಪಕ್​ ಭರತ್ ಹಾಗೂ ಮಗುವಿನ ಜೊತೆಯಲ್ಲಿ ಮನೆಯಲ್ಲಿ ಉಳಿದಿದ್ದಾರೆ. ಬಳಿಕ ಮನೆಗೆ ಬೆಂಕಿ ಹೊತ್ತಿಕೊಂಡಿದ್ದನ್ನ ಕಂಡ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


ಘಟನೆಯಲ್ಲಿ ದೀಪಕ್ ಹಾಗೂ ಬಾಲಕ ತನ್ವೀತ್ ಸಾವನ್ನಪ್ಪಿದ್ದಾರೆ. ಭರತ್​ ಗಂಭೀರವಾಗಿ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಅವರನ್ನ ಎ.ಸಿ.ಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿ ನಂದಿಸಲಾಗಿದ್ದು, ಸ್ಥಳಕ್ಕೆ ಬಂದ ಪೊಲೀಸರು ಮನೆಯಲ್ಲಿ ಪರಿಶೀಲನೆ ನಡೆಸಿದಾಗ ಪೆಟ್ರೋಲ್​​ ವಾಸನೆ ಬರುತ್ತಿದ್ದುದು ಗಮನಕ್ಕೆ ಬಂದಿದೆ. ಹೀಗಾಗಿ ಮನೆಗೆ ಬೆಂಕಿ ಹಚ್ಚಿ ಕೊಲೆ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಹಿರಿಯ ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಸಂಬಂಧ ಬೆಳ್ಳೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಬೆಂಕಿ ಹೊತ್ತಿಕೊಂಡಿದ್ದು ಹೇಗೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ