Breaking News

ಗ್ಯಾಂಗ್‌ ರೇಪ್‌ ಹಿನ್ನೆಲೆಯಲ್ಲಿ ಮೈಸೂರಿಗೆ ಬಂದು ಸುತ್ತಾಟದಲ್ಲೇ ಕಾಲ ಕಳೆದ ಸಚಿವ!

Spread the love

ಮೈಸೂರು: ಸಾಮೂಹಿಕ ಅತ್ಯಾಚಾರದ ಹಿನ್ನೆಲೆಯಲ್ಲಿ ಗುರುವಾರ ರಾತ್ರಿಯೇ ಮೈಸೂರಿಗೆ ಬಂದು ವಾಸ್ತವ್ಯ ಹೂಡಿದ್ದರೂ ಗೃಹ ಸಚಿವ ಆರಗ ಜ್ಞಾನೇಂದ್ರ ಶುಕ್ರವಾರ ಸುತ್ತಾಟ, ಪೂಜೆಗಳಲ್ಲೇ ಕಾಲ ಕಳೆದರು.

ಶುಕ್ರವಾರ ಬೆಳಿಗ್ಗೆ ಚಾಮುಂಡಿಬೆಟ್ಟಕ್ಕೆ ತೆರಳಿ, ವಿಶೇಷ ಪೂಜೆ ಸಲ್ಲಿಸಿದರು. ನಂತರ, ಕರ್ನಾಟಕ ಪೊಲೀಸ್‌ ಅಕಾಡೆಮಿಯಲ್ಲಿ ಸುತ್ತಾಟ ನಡೆಸಿದರು. ಅಲ್ಲಿ ಫೈರಿಂಗ್ ಸ್ಟಿಮಿಲೇಟರ್‌ನ್ನು ಉದ್ಘಾಟಿಸಿ, ತಾವೂ ಫೈರಿಂಗ್‌ ನಡೆಸಿ ಖುಷಿಪಟ್ಟರು. ಮಾದರಿ ಪೊಲೀಸ್ ಠಾಣೆ, ಪರೀಕ್ಷಾರ್ಥಿಗಳ ಕೊಠಡಿ, ಸಭಾಂಗಣ, ಗ್ರಂಥಾಲಯ ವೀಕ್ಷಿಸಿದರು.

ಅತ್ಯಾಚಾರ ಪ್ರಕರಣ ಹಾಗೂ ನಗರದಲ್ಲಿ ಹೆಚ್ಚುತ್ತಿರುವ ಅಪರಾಧ ಚಟುವಟಿಕೆಗಳನ್ನು ಕುರಿತು ಅಧಿಕಾರಿಗಳೊಂದಿಗೆ ಅವರು ಸಭೆ ಆರಂಭಿಸುವ ಹೊತ್ತಿಗೆ ಮಧ್ಯಾಹ್ನ 1 ಗಂಟೆಯಾಗಿತ್ತು.

ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅತ್ಯಾಚಾರ ಆರೋಪಿಗಳನ್ನು ಕೂಡಲೇ ಪತ್ತೆ ಹಚ್ಚಲು ಆಗುವುದಿಲ್ಲ. ಹೆಚ್ಚಿನ ಸಮಯ ಬೇಕಾಗುತ್ತದೆ. ಯುವತಿಯ ಹೇಳಿಕೆ ಪಡೆದ ಬಳಿಕವೇ ತನಿಖೆಯನ್ನು ಚುರುಕುಗೊಳಿಸಲು ಸಾಧ್ಯ’ ಎಂದರು. ಸಭೆ ಬಳಿಕ ಅವರು ಘಟನೆಯ ಸ್ಥಳಕ್ಕೆ ಭೇಟಿ ನೀಡಿದ್ದರು.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ