Breaking News
Home / Uncategorized / ಮೈಸೂರು ರಾಜಮನೆತನದ ಆನೆಗಳನ್ನು ಗುಜರಾತ್​ಗೆ ಕಳುಹಿಸಲು ನಿರ್ಧಾರ; ಕಾರಣ ಇಲ್ಲಿದೆ

ಮೈಸೂರು ರಾಜಮನೆತನದ ಆನೆಗಳನ್ನು ಗುಜರಾತ್​ಗೆ ಕಳುಹಿಸಲು ನಿರ್ಧಾರ; ಕಾರಣ ಇಲ್ಲಿದೆ

Spread the love

ಮೈಸೂರು: ರಾಜಮನೆತನದ ಆನೆಗಳನ್ನು (Elephants) ಗುಜರಾತ್​ಗೆ ಕಳುಹಿಸಲು ಸಿದ್ಧತೆ ನಡೆಯುತ್ತಿದೆ. ಅರಮನೆಯಲ್ಲಿರುವ ಪ್ರತಿ ಆನೆಗಳನ್ನು ನಿರ್ವಹಣೆ ಮಾಡಲು ದಿನಕ್ಕೆ 10 ಸಾವಿರ ರೂ. ಖರ್ಚಾಗುತ್ತಿದೆ. ತಿಂಗಳಿಗೆ 6 ಆನೆಗಳ ನಿರ್ವಹಣೆಗೆ ಸುಮಾರು 18 ಲಕ್ಷ ರೂ. ವೆಚ್ಚವಾಗುತ್ತಿದೆ. ಹೀಗಾಗಿ ನಾಲ್ಕು ಆನೆಗಳನ್ನು ಗುಜರಾತ್​ಗೆ ಕಳುಹಿಸಲು ಸಿದ್ಧತೆ ನಡೆಯುತ್ತಿದೆ. ಸದ್ಯ ಆರು ಆನೆಗಳಿದ್ದು, ಇದರಲ್ಲಿ ನಾಲ್ಕು ಆನೆಗಳು ಗುಜರಾತ್​ಗೆ ಕಳುಹಿಸಲಾಗುತ್ತದೆ. ಇನ್ನುಳಿದ ಎರಡು ಆನೆಗಳು ಅರಮನೆಯಲ್ಲೇ ಉಳಿದುಕೊಳ್ಳಲಿವೆ.

ಅರಮನೆ ಆನೆಗಳು ದಸರಾ ಪರಂಪರೆಯ ಪೂಜೆ ವೇಳೆ ಬಳಕೆಯಾಗುತ್ತಿದ್ದವು. ಪೂಜಾ ಕೈಂಕರ್ಯದಲ್ಲಿ ಭಾಗಿಯಾಗುತ್ತಿದ್ದವು. ಇದೀಗ ಎರಡು ಆನೆಗಳನ್ನು ಉಳಿಸಿಕೊಂಡು ಉಳಿದ ಆನೆಗಳ ರವಾನೆಗೆ ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ರಾಜಮನೆತನದವರು ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದಾರೆ. ಸೀತಾ, ರೂಬಿ, ರಾಜೇಶ್ವರಿ, ಜೆಮಿನಿ ಹೆಸರಿನ ಆನೆಗಳು ಗುಜರಾತ್​ಗೆ ಕಳುಹಿಸಲಾಗುತ್ತದೆ. ಇನ್ನುಳಿದ ಚಂಚಲ್ ಮತ್ತು ಪ್ರೀತಿ ಹೆಸರಿನ ಎರಡು ಆನೆಗಳು ಅರಮನೆಯಲ್ಲೇ ಉಳಿಯಲಿವೆ.

ಗುಜರಾತ್ ಇಸ್ಕಾನ್​ಗೆ ಈ ಆನೆಗಳನ್ನು ಕಳುಹಿಸಲಾಗುತ್ತಿದೆ. ಅಲ್ಲಿ ಈಗಾಗಲೇ 50 ಆನೆಗಳಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ.

ದಸರಾ ಉದ್ಘಾಟನೆಗೆ 15 ದಿನ ಮಾತ್ರ ಬಾಕಿ
ವಿಶ್ವ ಪ್ರಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೇವಲ 15 ದಿನ ಮಾತ್ರ ಬಾಕಿಯಿದೆ. ಈವರೆಗೂ ದಸರಾ ಉದ್ಘಾಟಕರು ಯಾರೆಂದು ನಿರ್ಧರಿಸಿಲ್ಲ. ಉದ್ಘಾಟಕರ ವಿಚಾರವಾಗಿ ಯಾವುದೇ ಚರ್ಚೆಯೂ ಆಗಿಲ್ಲ. ಇದುವರೆಗೂ ಯಾರೊಬ್ಬರ ಹೆಸರನ್ನೂ ಸರ್ಕಾರ ಪ್ರಸ್ತಾಪಿಸಿಲ್ಲ.


Spread the love

About Laxminews 24x7

Check Also

ಎಲ್ರೂ ನನ್ನ ಶವ ನೋಡಲು ಬನ್ನಿ, ಇಲ್ಲಂದ್ರೆ ದೆವ್ವ ಆಗಿ ಬರ್ತೀನಿ’; ಡೆತ್​ನೋಟ್​ನಲ್ಲಿತ್ತು ಈ ಕೊನೇ ಆಸೆ

Spread the love ರಾಯಚೂರು: ಯುವತಿಯೊಬ್ಬಳು ಗಣೇಶ ವಿಸರ್ಜನೆಗಾಗಿ ನಿರ್ಮಿಸಿದ್ದ ಕೆರೆಯೊಂದಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೂ ಮೊದಲು 4 ಪುಟಗಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ