ಸರ್ಕಾರಿ ಕಚೇರಿಗಳು, ಜಿಲ್ಲಾ ಪಂಚಾಯತಿ. ಅಂಚೆ ಕಚೇರಿ, ವಿದ್ಯುತ್ ಇಲಾಖೆ ಮಹಾನಗರ ಪಾಲಿಕೆ, ನೀರು ಸರಬರಾಜು ಕೇಂದ್ರ, ಬ್ಯಾಂಕ್ಗಳು, ಎಟಿಎಂ, ಔಷಧಿ, ವೈದ್ಯಕೀಯ ಸಲಕರಣೆ, ಕೃಷಿಗೆ ಸಂಬಂಧಿಸಿದ ಚಟುವಟಿಕೆ, ರೇಷ್ಮೆ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆಗೆ ಸಂಬಂಧಿಸಿದಂತೆ ವ್ಯಾಪಾರ ಹಾಗೂ ಮಾರುಕಟ್ಟೆಗಳು ಎಂದಿನಂತೆ ಕೆಲಸ ನಿರ್ವಹಿಸಲಿವೆ.
ಮೈಸೂರು(ಮಾ.23): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾದ ಹಿನ್ನೆಲೆ, ಇಂದಿನಿಂದ ಜಿಲ್ಲೆ ಲಾಕ್ಡೌನ್ ಆಗಲಿದೆ. ಇಂದಿನಿಂದ ಮಾರ್ಚ್ 31ರವೆಗೆ ಜಿಲ್ಲೆಯಲ್ಲಿ ಅಗತ್ಯ ವಸ್ತು ಮಾರಾಟಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಎಲ್ಲಾ ವಾಣಿಜ್ಯ ವ್ಯಾಪಾರಗಳಿಗೆ ನಿರ್ಬಂಧ ಹೇರಲಾಗಿದೆ. ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಎಲ್ಲಾ ವಿಧದ ಅಂಗಡಿ ಮಳಿಗೆಗಳನ್ನು ಮುಚ್ಚಲಾಗಿದೆ. ಕಾರ್ಖಾನೆಗಳಲ್ಲಿ ಶೇಕಡ 50ರಷ್ಟು ಕಾರ್ಮಿಕರು ಮಾತ್ರ ಕೆಲಸ ಮಾಡಬೇಕು. ಐಟಿ ಬಿಟಿ ಕಂಪನಿಯವರು ಮನೆಯಿಂದಲೇ ಕೆಲಸ ಮಾಡಿಸಬೇಕು ಎಂದು ಆದೇಶಿಸಲಾಗಿದೆ.
ಇನ್ನು, ಜಿಲ್ಲೆಯಲ್ಲಿ ಖಾಸಗಿ ಎಸಿ ವಾಹನಗಳಿಗೆ ನಿರ್ಬಂಧ ಹೇರಲಾಗಿದೆ. ಅಂತರರಾಜ್ಯ =ಸಾರಿಗೆ ವಾಹನಗಳಿಗೆ ನಿರ್ಬಂಧ ಹಾಕಲಾಗಿದೆ. ಆಹಾರ ಪದಾರ್ಥಗಳು, ಪಡಿತರ ಅಂಗಡಿ, ತರಕಾರಿ, ಹಣ್ಣುಗಳ ಮಾರಾಟಕ್ಕೆ ಯಾವುದೇ ತಡೆ ಇಲ್ಲ. ಇವುಗಳ ಟ್ರಾನ್ಸಪೋರ್ಟ್‌ಗಳಿಗೂ ಯಾವುದೇ ನಿರ್ಬಂಧ ಇರುವುದಿಲ್ಲ.
ಸರ್ಕಾರಿ ಕಚೇರಿಗಳು, ಜಿಲ್ಲಾ ಪಂಚಾಯತಿ. ಅಂಚೆ ಕಚೇರಿ, ವಿದ್ಯುತ್ ಇಲಾಖೆ ಮಹಾನಗರ ಪಾಲಿಕೆ, ನೀರು ಸರಬರಾಜು ಕೇಂದ್ರ, ಬ್ಯಾಂಕ್ಗಳು, ಎಟಿಎಂ, ಔಷಧಿ, ವೈದ್ಯಕೀಯ ಸಲಕರಣೆ, ಕೃಷಿಗೆ ಸಂಬಂಧಿಸಿದ ಚಟುವಟಿಕೆ, ರೇಷ್ಮೆ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆಗೆ ಸಂಬಂಧಿಸಿದಂತೆ ವ್ಯಾಪಾರ ಹಾಗೂ ಮಾರುಕಟ್ಟೆಗಳು ಎಂದಿನಂತೆ ಕೆಲಸ ನಿರ್ವಹಿಸಲಿವೆ.
ಇನ್ನು, ಹೋಟೆಲ್‌ಗಳಲ್ಲಿ ಪಾರ್ಸಲ್ ಸೇವೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಇಂದಿನಿಂದ ಮೈಸೂರು ಜಿಲ್ಲೆ ಗಡಿಗಳು ಬಂದ್ ಆಗಲಿವೆ. ಜಿಲ್ಲೆಯ ಗಡಿ ಭಾಗದ ಐದು ಚೆಕ್ ಪೋಸ್ಟ್‌ಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ಹೊರ ರಾಜ್ಯದವರ ಮೇಲೆ ತೀವ್ರ ನಿಗಾ ಇರಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲೂ ಪೂಜೆ ಪುನಸ್ಕಾರ ನೆಪದಲ್ಲಿ ಗುಂಪು ಸೇರುವಂತಿಲ್ಲ. ಇಂದಿನಿಂದ ಮೈಸೂರಿನಲ್ಲಿ ಬೈಕ್, ಟ್ಯಾಕ್ಸಿ ಸೇವೆ ಬಂದ್ ಆಗಲಿದೆ.
ಮಾರ್ಚ್ 31ರವರೆಗೆ ಬೈಕ್ ಟ್ಯಾಕ್ಸಿ,ಈಜುಕೊಳ, ಜಿಮ್ ಮುಂತಾದವುಗಳಿಗೂ ನಿರ್ಬಂಧ ಹೇರಲಾಗಿದೆ. ಮೈಸೂರು ಜಿಲ್ಲೆಯಾದ್ಯಂತ ಸೆಕ್ಷನ್ 144(3) ಜಾರಿ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.