Breaking News

ಮೈಸೂರು ಮೃಗಾಲಯದಲ್ಲಿ ಹೆಣ್ಣಾನೆ ದತ್ತು ಪಡೆದ ಸಚಿವ ಎಸ್.ಟಿ.ಸೋಮಶೇಖರ್

Spread the love

ಮೈಸೂರು: ಮೈಸೂರು ಮೃಗಾಲಯದಲ್ಲಿರುವ ಚಾಮುಂಡಿ ಎಂಬ 5 ವರ್ಷದ ಹೆಣ್ಣಾನೆಯನ್ನು ಮಾನ್ಯ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು 1 ಲಕ್ಷ 75 ಸಾವಿರ ರೂಪಾಯಿ ವೈಯುಕ್ತಿಕ ನೆರವನ್ನು ನೀಡುವ ಮೂಲಕ 1 ವರ್ಷಕ್ಕೆ ದತ್ತು ಪಡೆದರು.

ಲಾಕ್ ಡೌನ್ ಹಿನ್ನೆಲೆಯಲ್ಲಿ ಮೈಸೂರು ಮೃಗಾಲಯಕ್ಕೆ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ಅಭಿರಾಂ ಶಂಕರ್ ಮತ್ತು ಸ್ಥಳೀಯ ಶಾಸಕರಾದ ರಾಮದಾಸ್ ಅವರ ಒಡಗೂಡಿ ಭೇಟಿ ನೀಡಿ ಪರಿಶೀಲಿಸಿದರು.

ಇದೇ ವೇಳೆ, 16 ಹುಲಿಗಳಿಗೆ ಮಾಂಸಾಹಾರ ನೀಡಲು ಒಂದು ದಿನ ವೆಚ್ಚವಾದ 25 ಸಾವಿರ ರೂಪಾಯಿಯನ್ನು ವೈಯಕ್ತಿಕವಾಗಿ ನೀಡಿದರು.

ಪ್ರಾಣಿ-ಪಕ್ಷಿಗಳಿಗೆ ಕೊರೋನಾ ಹಿನ್ನೆಲೆಯಲ್ಲಿ ಕೈಗೊಡಿರುವ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಆಹಾರ ಕುಡಿಯುವ ನೀರು ಸ್ವಚ್ಛತೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ