ಮೈಸೂರು: ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ಅವರ ಮಗ ಕಡ್ಲೆಪುರಿ ತಿನ್ನುತ್ತಿದ್ದನಾ ಎಂದು ಸಚಿವ ಎಸ್.ಟಿ.ಸೋಮಶೇಖರ್ ಪ್ರಶ್ನೆ ಮಾಡಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್, ನಾನು ಸಚಿವನಾಗಿ ಮೂರು ತಿಂಗಳು ಆಗಿದೆ. ಇದುವರೆಗೂ ಸಿಎಂ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಆಡಳಿತ ವಿಚಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ. ವಿಜಯೇಂದ್ರ ಅವರನ್ನು ಭೇಟಿ ಮಾಡಿ ಅಂತ ಸಿಎಂ ನಮಗೆ ಹೇಳಿಲ್ಲ. ಈ ಹಿಂದೆ ಸಿದ್ದರಾಮಯ್ಯನವರು 5 ವರ್ಷ ಸಿಎಂ ಆಗಿದ್ದಾಗ ಅವರ ಮಗ ಕಡ್ಲೆಪುರಿ ತಿನ್ನತಾಯಿದ್ದಾನಾ ಎಂದು ಪ್ರಶ್ನೆ ಮಾಡಿದರು. ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯ ಕಾರಣಕ್ಕಾಗಿ ಟೀಕೆ ಮಾಡುತ್ತಿದ್ದು, ಅವರ ಆರೋಪಗಳಲ್ಲಿ ಯಾವುದೇ ಸತ್ಯವಿಲ್ಲ ಎಂದರು.ಸಿದ್ದರಾಮಯ್ಯನವರ ಸಂಪರ್ಕದಲ್ಲಿ ಯಾರಿದ್ದಾರೆ ಎಂಬ ಮಾಹಿತಿ ನನಗಿಲ್ಲ. ರಾಜ್ಯಸಭಾ ಮತ್ತು ವಿಧಾನಪರಿಷತ್ ಚುನಾವಣೆಗಳು ಬಂದಿವೆ. ಹಾಗಾಗಿ ಕೆಲ ಕಾರ್ಯಕರ್ತರು ಟಿಕೆಟ್ ನೀಡುವಂತೆ ಮನವಿ ಮಾಡಿಕೊಳ್ಳೋದನ್ನ ಬಂಡಾಯ ಎಂದು ಹೇಳಲು ಸಾಧ್ಯ. ಯಾವುದೋ ಒಂದು ಹಳೆಯ ಫೋಟೋ ತೋರಿಸಿ ಬಂಡಾಯ ಅಂದ್ರೆ ಹೇಗೆ? ಫೋಟೋಗೆ ಸಂಬಂಧಿಸಿದಂತೆ ರಾಮದಾಸ್, ಉಮೇಶ್ ಕತ್ತಿ ತಮ್ಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ ಎಂದು ಹೇಳಿದರು.
ಬಿಜೆಪಿ ಸೇರಿದ 17 ಜನರು ನಾವು ಇಂದಿಗೂ ಒಂದಾಗಿದ್ದೇವೆ. ಮುಖ್ಯಮಂತ್ರಿಗಳು ನೀಡಿದ ಭರವಸೆಯನ್ನು ಈಡೇರಿಸಿದ್ದಾರೆ. ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ. ರೋಷನ್ ಬೇಗ್, ಹೆಚ್.ವಿಶ್ವನಾಥ್, ಆರ್.ಶಂಕರ್, ಎಂಟಿಬಿ ನಾಗರಾಜ್ ನಮಗೆ ಒಂದೇ. ವಿಧಾನ ಪರಿಷತ್ ಟಿಕೆಟ್ ಯಾರಿಗೆ ನೀಡಬೇಕು ಎಂಬುದನ್ನ ಮುಖ್ಯಮಂತ್ರಿಗಳು ನಿರ್ಧರಿಸುತ್ತಾರೆ, ಕೊಟ್ಟ ಮಾತನ್ನು ಸಿಎಂ ಈಡೇರಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ಮಾಜಿ ಸಚಿವ ಎಂಟಿಬಿ ನಾಗರಾಜ್ ಹೇಳಿಕೆ ಬೇಸರ ವ್ಯಕ್ತಪಡಿಸಿದ ಸಚಿವರು, ಬಿಜೆಪಿಯಲ್ಲಿ ಯಾರು ಯಾರಿಗೂ ಅಡ್ಡಗಾಲು ಹಾಕಲ್ಲ. ಈ ರೀತಿಯ ಹೇಳಿಕೆಗಳನ್ನು ನೀಡಿಯೇ ಎಂಟಿಬಿ ಚುನಾವಣೆಯಲ್ಲಿ ಸೋತರು ಎಂದು ಹೇಳಿದರು.