ಮೈಸೂರು: ಇಂದು ಕೋವಿಡ್-19 ಆಸ್ಪತ್ರೆಯಿಂದ ಗುಣಮುಖರಾಗಿ ಇಬ್ಬರು ಡಿಸ್ಚಾರ್ಜ್ ಆಗಿದ್ದು, ಮೈಸೂರು ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಎರಡಕ್ಕೆ ಇಳಿದಿದೆ.

ಜಿಲ್ಲೆಯಲ್ಲಿ ಒಟ್ಟು 90 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಈಗಾಗಲೇ 86 ಜನರು ಗುಣಮುಖರಾಗಿ ಮನೆ ತಲುಪಿದ್ದಾರೆ. ಇಂದು ಸಂಜೆ ರೋಗಿ 395 ಮತ್ತು 204 ಸಂಪೂರ್ಣ ಗುಣಮುಖವಾದ ಹಿನ್ನೆಲೆಯಲ್ಲಿ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖವಾದ ಹಿನ್ನೆಲೆ ಮೈಸೂರಿನ ಜನ ಕೊಂಚ ನಿರಾಳರಾಗಿದ್ದಾರೆ. ಕೊರೊನಾ ಸೋಂಕಿತರ ಸಕ್ರಿಯ ಪ್ರಕರಣಗಳು ಇಳಿಮುಖವಾದರೂ ಜಿಲ್ಲಾಡಳಿತ ಎರಡನೇ ಅಲೆಯ ವಿರುದ್ಧದ ಹೋರಾಟಕ್ಕೆ ಸಿದ್ಧವಾಗ್ತಿದೆ.
Laxmi News 24×7