ತುಮಕೂರು: ಸರ್ಕಾರಿ ಶಾಲೆಯ ಅಡುಗೆ ಕೋಣೆಯಲ್ಲಿ ನಿಗೂಢ ಸ್ಫೋಟ ಸಂಭವಿಸಿ, ಅಡುಗೆ ಸಹಾಯಕಿ ಗಾಯಗೊಂಡ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಕಂದಿಕೆರೆ ಗ್ರಾಮದಲ್ಲಿ ನಡೆದಿದೆ. ಸಿಲಿಂಡರ್ ಹಾಗೂ ಕುಕ್ಕರ್ ಸುರಕ್ಷಿತವಾಗಿದ್ದು, ಯಾವ ವಸ್ತು ಸ್ಫೋಟಗೊಂಡಿದೆ ಎಂದು ತಿಳಿದುಬಂದಿಲ್ಲ.
ಶಾಲೆಯ ದಾಸೋಹದ ಅಡುಗೆ ಕೋಣೆಯಲ್ಲಿ ಈ ಸ್ಫೋಟ ಸಂಭವಿಸಿದೆ. ಸ್ಫೋಟದ ರಭಸಕ್ಕೆ ಗೋಡೆ ಕುಸಿದುಬಿದ್ದು, ಅಡುಗೆ ಸಹಾಯಕಿ ಲತಾ ಅವರಿಗೆ ಗಾಯವಾಗಿದೆ. ಇಂದು (ಸೆ.24) ಮಧ್ಯಾಹ್ನ ಅಡುಗೆ ಕೋಣೆಯಲ್ಲಿ ಕೆಲಸ ಮಾಡುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಗಾಯಾಳುವನ್ನ ಚಿಕ್ಕನಾಯಕನಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಚಿಕ್ಕನಾಯಕನಹಳ್ಳಿ ಪೊಲೀಸರು ಹಾಗೂ ತಹಶೀಲ್ದಾರ್ ಮಮತಾ, ಬಿಇಒ ಕಾಂತರಾಜು ಸೇರಿದಂತೆ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Laxmi News 24×7