Breaking News

ಚೈನ್ ಕಳ್ಳನನ್ನು ಹಿಡಿದುಕೊಟ್ಟ ಯುವಕನ ಮೇಲೆಯೇ ಹಲ್ಲೆ – ಮೈಸೂರಿನಲ್ಲಿ ಹಿಂದೂಗಳಿಂದ ಪ್ರತಿಭಟನೆ

Spread the love

ಮೈಸೂರು: ಯುವತಿಯ ಸರ ಕದಿಯಲು ಯತ್ನಿಸಿದ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯ ಯುವಕನ ಮೇಲೆಯೇ ಮುಸ್ಲಿಂ ಯುವಕರ ತಂಡವೊಂದು ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ನಗರದ ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಜೆ.ಸಿ. ನಗರದ ಕವಿತಾ ಬೇಕರಿ ಸರ್ಕಲ್ ಬಳಿ ಸರ ಕದಿಯಲು ಯುವಕನೊಬ್ಬ ಯತ್ನಿಸಿದ್ದಾನೆ ಎನ್ನಲಾಗಿದೆ. ಇದನ್ನು ಗಮನಿಸಿದ ಸ್ಥಳೀಯ ನಿವಾಸಿ ಪುನೀತ್ ಎಂಬುವವರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಹಿಡಿದು ವಿದ್ಯಾರಣ್ಯಪುರಂ ಪೊಲೀಸರಿಗೆ ಒಪ್ಪಿಸಿದ್ದರು.

ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಸರಗಳ್ಳತನಕ್ಕೆ ಯತ್ನಿಸಿದ ಆರೋಪಿಯನ್ನು ಬಿಟ್ಟು ಕಳುಹಿಸಿದ್ದಾರೆ ಎಂದು ಸ್ಥಳೀಯರು ಗಂಭೀರ ಆರೋಪ ಮಾಡಿದ್ದಾರೆ. ಠಾಣೆಯಿಂದ ಹೊರಬಂದ ಬಳಿಕ ಆರೋಪಿ ಹಾಗೂ ಆತನ ಗುಂಪು ಪುನೀತ್ ಮೇಲೆ ಮನಬಂದಂತೆ ಹಲ್ಲೆ ನಡೆಸಿದೆ ಎಂದು ದೂರಲಾಗಿದೆ.

ಹಲ್ಲೆಯಿಂದ ಗಾಯಗೊಂಡಿರುವ ಪುನೀತ್ ಹಾಗೂ ಸ್ಥಳೀಯ ಸಾರ್ವಜನಿಕರು ಘಟನೆಯನ್ನು ಖಂಡಿಸಿ ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಸರಗಳ್ಳತನಕ್ಕೆ ಯತ್ನಿಸಿದವನನ್ನು ಬಿಟ್ಟು ಕಳುಹಿಸಿರುವ ಪೊಲೀಸರ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು, ಸರಗಳ್ಳತನಕ್ಕೆ ಯತ್ನಿಸಿದ ಆರೋಪಿ ಹಾಗೂ ಹಲ್ಲೆ ನಡೆಸಿದ ಗುಂಪನ್ನು ತಕ್ಷಣವೇ ಬಂಧಿಸಬೇಕೆಂದು ಪಟ್ಟು ಹಿಡಿದಿದ್ದಾರೆ. ಘಟನೆಯಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ವಿದ್ಯಾರಣ್ಯಪುರಂ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ. ಹಲ್ಲೆಗೊಳಗಾದ ಪುನೀತ್ ಹಾಗೂ ಸ್ಥಳೀಯ ನಿವಾಸಿಗಳಿಂದ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡ ಅವರು, ಯುವಕನ ಮೇಲೆ ಹಲ್ಲೆ ನಡೆಸಿರುವ ಆರೋಪಿಗಳ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಟ್ರೆಕ್ಕಿಂಗ್‌ಗೆ ಬಂದು ದಾರಿ ತಪ್ಪಿದ ಒಡಿಶಾ ಮೂಲದ ಯೂಟ್ಯೂಬರ್ – ರೋಪ್ ಸಹಾಯದಿಂದ ರಕ್ಷಣೆ

Spread the loveರಾಮನಗರ: ವಾರಾಂತ್ಯದ ಹಿನ್ನೆಲೆ ಟ್ರೆಕ್ಕಿಂಗ್‌ಗೆ  ಬಂದು ದಾರಿ ತಪ್ಪಿದ್ದ ಒಡಿಶಾ ಮೂಲದ ಯೂಟ್ಯೂಬರ್‌ರನ್ನು  ರೋಪ್ ಸಹಾಯದಿಂದ ಅಗ್ನಿಶಾಮಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ