Breaking News

ನಾಡಪ್ರಭು ಕೆಂಪೇಗೌಡ ಜಯಂತಿ – ಇಂದು ಬೆಂಗಳೂರಲ್ಲಿ 15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ

Spread the love

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ 15 ಲಕ್ಷ ಸಸಿಗಳನ್ನು ನೆಡುವ ಬೃಹತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಗಿಡ ನೆಟ್ಟು ವಿಶ್ವದಾಖಲೆ ಗುರಿಯೊಂದಿಗೆ ಹಸಿರು ಅಭಿಯಾನ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಂಗಳೂರು ನಗರ ಪುನಶ್ಚೇತನ ಮಿಷನ್ 2026-30ರ ಅಂಗವಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಈ ಅಭಿಯಾನ ಕೈಗೊಂಡಿದೆ.

ಡಾ. ಶಿವರಾಮ ಕಾರಂತ ಬಡಾವಣೆ, ನಾಡಪ್ರಭು ಕೆಂಪೇಗೌಡ ಬಡಾವಣೆ, ಬನಶಂಕರಿ 6ನೇ ಹಂತ, ಕೆರೆ ದಂಡೆಗಳು, ರಾಜಕಾಲುವೆಗಳ ಇಕ್ಕೆಲಗಳು, ಉದ್ಯಾನಗಳು ಸೇರಿದಂತೆ ವಿವಿಧ ಪರಿಸರ ವಲಯಗಳಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಒಟ್ಟು 243 ಎಕರೆ ಪ್ರದೇಶವನ್ನು 49 ವಲಯಗಳಾಗಿ ವಿಂಗಡಿಸಲಾಗಿದೆ.

ಬೆಳಗ್ಗೆ 11 ಗಂಟೆಗೆ ಕೃಷ್ಣಪಥ ರಸ್ತೆ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಂಪೇಗೌಡರ 7 ಪುರಜ್ಯೋತಿಗಳ ಸ್ವೀಕಾರ ಮಾಡಲಿದ್ದಾರೆ.

ಕಾರ್ಯಕ್ರಮದ ಬಗ್ಗೆ ಬಿಡಿಎ ಅಧ್ಯಕ್ಷ ಎನ್.ಎ.ಹ್ಯಾರಿಸ್ ಮಾತನಾಡಿ, ಇಂದು ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಜಯಂತಿ ಇದೆ. ಈ ದಿನ 15 ಲಕ್ಷ ಸಸಿ ನೆಡುವ ಗಿನ್ನಿಸ್ ದಾಖಲೆ ಕಾರ್ಯಕ್ರಮ ಶುರುವಾಗಲಿದೆ. 12 ಗಂಟೆಗಳಲ್ಲಿ 15 ಲಕ್ಷ ಸಸಿ ನೆಡಲಾಗುತ್ತಿದೆ. ಸುಮಾರು 50 ಸಾವಿರ ಸ್ವಯಂ ಸೇವಕರು ಕೆಲಸ ಮಾಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರ ಹೆಸರಿನಲ್ಲಿ ಕೃಷ್ಣ ಪಥ ರಸ್ತೆ ಉದ್ಘಾಟನೆಯಾಗಲಿದೆ. ಜನ ತುಂಬಾ ಉತ್ಸುಕತೆಯಿಂದ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದಾರೆ.

ಬಿಜೆಪಿ ಕಾರ್ಯಕ್ರಮ
ಇತ್ತ ಬೆಂಗಳೂರಿನ ಸದಾಶಿವನಗರದಲ್ಲಿ ಕೆಂಪೇಗೌಡ ಜಯಂತಿ ಆಚರಿಸಲಾಗಿದೆ. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಅಶ್ವಥ್ ನಾರಾಯಣ್ ಭಾಗಿಯಾಗಿದ್ದರು. ಕೆಂಪೇಗೌಡ ಪ್ರತಿಮೆಗೆ ಬಿಜೆಪಿ ನಾಯಕರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ