ಬಾಗಲಕೋಟೆ : ವಿಧಾನಸಭಾ ಕ್ಷೇತ್ರದ ಮುಖಂಡರಾದ ಬಸವರಾಜ ಕಟಗೇರಿ ಅವರು ಇಂದು ಅಧಿಕೃತವಾಗಿ ಮರಳಿ ನಮ್ಮ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು.
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಅಭಿವೃದ್ಧಿ ಪಥ ಹಾಗೂ ಪಕ್ಷದ ಸಿದ್ಧಾಂತವನ್ನು ಮೆಚ್ಚಿ ಮರಳಿ ಬಂದಿರುವ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.
ಮುಂಬರುವ ದಿನಗಳಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷದ ವಿಜಯೋತ್ಸವಕ್ಕಾಗಿ ಶ್ರಮಿಸೋಣ ಬಸವರಾಜ್ ಕಟಗೇರಿಗೆ ತಿಳಿಸಿದರು.
ಇದೆ ಸಂದರ್ಭದಲ್ಲಿ ಅರುಣ ಲೋಕಾಪುರ ಅವರನ್ನು
ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಚಿತ್ರದುರ್ಗ ಸಂಸದರಾದ ಗೋವಿಂದ ಕಾರಜೋಳ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಅರುಣ್ ಶಹಾಪುರ, ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಶರಣು ತಳ್ಳಿಕೇರಿ, ಜಿಲ್ಲಾಧ್ಯಕ್ಷರಾದ ಶಾಂತಗೌಡ ಪಾಟೀಲ,
ಬೆಳಗಾವಿ ವಿಭಾಗದ ಸಹ ಪ್ರಭಾರಿಗಳಾದ ಬಸವರಾಜ್ ಯಂಕಂಚಿ ಹಾಗೂ ಪಕ್ಷದ ಪ್ರಮುಖ ಮುಖಂಡರುಗಳು ಉಪಸ್ಥಿತರಿದ್ದರು.
Laxmi News 24×7