Breaking News
Home / Uncategorized / ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​​ನ್ನು ಇಂದು ಭೇಟಿಯಾಗಲಿದ್ದಾರೆ ನರೇಂದ್ರ ಮೋದಿ

ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​​ನ್ನು ಇಂದು ಭೇಟಿಯಾಗಲಿದ್ದಾರೆ ನರೇಂದ್ರ ಮೋದಿ

Spread the love

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಗುರುವಾರ ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ (Kamala Harris) ಅವರನ್ನು ಭೇಟಿ ಮಾಡಲಿದ್ದಾರೆ. ಉಭಯ ನಾಯಕರ ನಡುವಿನ ಮೊದಲ ವೈಯಕ್ತಿಕ ಭೇಟಿ ಇದಾಗಿದೆ.  ಕಮಲಾ  ಹ್ಯಾರಿಸ್ ಅಮೆರಿಕದ ಉಪಾಧ್ಯಕ್ಷರಾಗಿ ಆಯ್ಕೆಯಾದ ಮೊದಲ ಭಾರತೀಯ ಮೂಲದ ವ್ಯಕ್ತಿ. ಈ ಹಿಂದೆ, ಇಬ್ಬರು ನಾಯಕರು ಕೊವಿಡ್ -19  (Covid -19) ಬಿಕ್ಕಟ್ಟಿನ ಸಂದರ್ಭದಲ್ಲಿ ದೂರವಾಣಿ ಮೂಲಕ ಮಾತನಾಡಿದ್ದರು.  ಪ್ರಧಾನಿ ಮೋದಿ ಬುಧವಾರ ಅಮೆರಿಕಕ್ಕೆ ಮೂರು ದಿನಗಳ ಭೇಟಿ ನೀಡಿದ್ದಾರೆ.ಇದು ಸುಮಾರು ಆರು ತಿಂಗಳಲ್ಲಿ ಅವರ ಮೊದಲ ವಿದೇಶಿ ಪ್ರವಾಸವಾಗಿದ್ದು, ಕೊವಿಡ್ -19 ಸಾಂಕ್ರಾಮಿಕ ರೋಗದ ನಂತರ ಇದು ಎರಡನೆಯದ್ದಾಗಿದೆ.

ಅಮೆರಿಕದಲ್ಲಿ ತನ್ನ ಮೊದಲ ದಿನ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ (UNGA) ಅಂಗವಾಗಿ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಆಯೋಜಿಸಿದ್ದ ವರ್ಚುವಲ್ ಜಾಗತಿಕ ಕೊವಿಡ್ -19 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿದರು.

ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಭಾರತವು ತನ್ನ ಲಸಿಕೆ ಉತ್ಪಾದನೆಯನ್ನು 95 ಇತರ ದೇಶಗಳೊಂದಿಗೆ ಮತ್ತು ವಿಶ್ವಸಂಸ್ಥೆಯ ಶಾಂತಿಪಾಲಕರೊಂದಿಗೆ ಹಂಚಿಕೊಂಡಿದೆ ಎಂದು ಹೇಳಿದರು.
“ಒಂದು ಕುಟುಂಬದಂತೆಯೇ, ನಾವು ಎರಡನೇ ಅಲೆ ಎದುರಿಸುತ್ತಿರುವಾಗ ಜಗತ್ತು ಕೂಡ ಭಾರತದ ಜೊತೆ ನಿಂತಿದೆ. ಭಾರತಕ್ಕೆ ವಿಸ್ತರಿಸಿದ ಒಗ್ಗಟ್ಟು ಮತ್ತು ಬೆಂಬಲಕ್ಕಾಗಿ, ನಾನು ನಿಮಗೆಲ್ಲರಿಗೂ ಧನ್ಯವಾದ ಹೇಳುತ್ತೇನೆ ಎಂದು ಹೇಳಿದರು.

2022 ರ ಅಂತ್ಯದ ವೇಳೆಗೆ ವಿಶ್ವನಾಯಕರು, ಲೋಕೋಪಕಾರಿಗಳು, ನಾಗರಿಕ ಸಮಾಜ, ಎನ್‌ಜಿಒಗಳು ಮತ್ತು ಉದ್ಯಮವನ್ನು ಒಟ್ಟುಗೂಡಿಸಿ ಕೊವಿಡ್ -19 ಅನ್ನು ಒಟ್ಟಾಗಿ ಕೊನೆಗೊಳಿಸಲು ಸಾಮಾನ್ಯ ದೃಷ್ಟಿಕೋನವನ್ನು ಹೊಂದುವುದು ಎಂದು ಶ್ವೇತಭವನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ವಾಷಿಂಗ್ಟನ್‌ನಲ್ಲಿ ತನ್ನ ನಿಗದಿತ ಕಾರ್ಯಕ್ರಮಗಳನ್ನು ಮುಗಿಸಿದ ನಂತರ ಪ್ರಧಾನಿ ಮೋದಿ ಸೆಪ್ಟೆಂಬರ್ 25 ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲು ನ್ಯೂಯಾರ್ಕ್‌ಗೆ ತೆರಳಲಿದ್ದಾರೆ
ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿ (UNGA) ಯ 76 ನೇ ಅಧಿವೇಶನದ ಉನ್ನತ ಮಟ್ಟದ ವಿಭಾಗದ ಸಾಮಾನ್ಯ ಚರ್ಚೆಯನ್ನು ಪ್ರಧಾನ ಮಂತ್ರಿ ಭಾಗಿಯಾಗಲಿದ್ದಾರೆ.


Spread the love

About Laxminews 24x7

Check Also

3ನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಅಲ್ಪಸಂಖ್ಯಾತರನ್ನು ಮುಗಿಸುತ್ತಾರೆ: ಸಚಿವ ಜಮೀರ್ ಅಹ್ಮದ್‌

Spread the loveಇದು ದೇಶ ಬಚಾವ್ ಎಲೆಕ್ಷನ್. ಬಿಜೆಪಿ ಒಳಗೆ ಒಂದು ರೋಗ ಇದೆ, ಬಿಜೆಪಿ ಎಂದರೆ ಕ್ಯಾನ್ಸರ್ ಇದ್ದಂತೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ