Breaking News

100 ಲಕ್ಷ ಕೋಟಿ ರೂ. ಮೊತ್ತದ ‘ಪಿಎಂ ಗತಿ ಶಕ್ತಿ ಯೋಜನೆ’ಗೆ ಇಂದು ಚಾಲನೆ

Spread the love

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಗತಿ ಶಕ್ತಿ ಯೋಜನೆಯನ್ನು (PM Gati Shakti Yojana) ಜಾರಿಗೆ ತರಲು ಮುಂದಾಗಿದ್ದು, ಇಂದು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಈ ಯೋಜನೆ ಬರೋಬ್ಬರಿ ₹100 ಲಕ್ಷ ಕೋಟಿ ಮೊತ್ತದ್ದಾಗಿದೆ. ಇನ್ನು ಈ ಯೋಜನೆಯಿಂದ ದೇಶದಲ್ಲಿ ಉದ್ಯೋಗಾವಕಾಶ ಸುಧಾರಿಸಲಿವೆ. ಗತಿ ಶಕ್ತಿ ಯೋಜನೆಯು ದೇಶದ ಮಾಸ್ಟರ್ ಪ್ಲಾನ್ ಮತ್ತು ಮೂಲಸೌಕರ್ಯಕ್ಕೆ ಅಡಿಪಾಯ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. 100 ಲಕ್ಷ ಕೋಟಿ ರೂಪಾಯಿ ಮೊತ್ತದ ಈ ಯೋಜನೆಯನ್ನು ದೇಶದಲ್ಲಿ ಉದ್ಯೋಗಾವಕಾಶ ಸುಧಾರಿಸಲು ಬಳಸಲಾಗುತ್ತದೆ.

ಇದು ಡಿಜಿಟಲ್ ಪ್ಲಾಟ್ ಫಾರ್ಮ್ ಆಗಿದ್ದು, ರೈಲ್ವೆ ಮತ್ತು ರಸ್ತೆ ಸೇರಿದಂತೆ 16 ಸಚಿವಾಲಯಗಳನ್ನು ಒಳಗೊಂಡಿರುವ ಸಮಗ್ರ ಯೋಜನೆಯಾಗಿದೆ. ಇದರಿಂದ ಮೂಲ ಸೌಕರ್ಯ ಸಂಪರ್ಕ ಯೋಜನೆ ಕೂಡ ಅನುಷ್ಠಾನಕ್ಕೆ ಬರಲಿದೆ. ದೇಶದಾದ್ಯಂತದ ಪ್ರಮುಖ ಕೈಗಾರಿಕಾ ಸಮೂಹಗಳಿಗೆ ಸಂಪರ್ಕ ಕಲ್ಪಿಸಲು ಮತ್ತು ಉದ್ಯೋಗ ಸೃಷ್ಟಿಸುವ ಗುರಿ ಹೊಂದಿದೆ. ಈ ಹಿಂದೆಯೇ ದೇಶದ 75 ನೇ ಸ್ವಾತಂತ್ರ್ಯ ದಿನಾಚರಣೆಯಂದು, ಸಮಗ್ರ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲು ಪ್ರಧಾನಿ ಮೋದಿ ಗತಿ ಶಕ್ತಿ ಮಾಸ್ಟರ್ ಪ್ಲಾನ್ ಆರಂಭಿಸುವುದಾಗಿ ಘೋಷಿಸಿದ್ದರು.

 


Spread the love

About Laxminews 24x7

Check Also

ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ

Spread the love ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ ಖಾನಾಪೂರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ