Breaking News

ನಿಸರ್ಗಮನೆಗೆ ರಾಷ್ಟ್ರೀಯ ಮಾನ್ಯತೆ: ಸಂತಸ ತಂದ ಸಂಗತಿ: ಡಾ. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ

Spread the love

ಬೆಳಗಾವಿ: ಶಿರಸಿಯ ಡಾ. ವೆಂಕಟರಮಣ ಹೆಗಡೆ ಅವರ ನಿಸರ್ಗಮನೆ ವೇದ ವೆಲ್‌ನೆಸ್ ಸೆಂಟರ್‌ಗೆ ರಾಷ್ಟ್ರೀಯ ಮಟ್ಟದ ಎನ್‌ಎಬಿಎಚ್ ಸಂಸ್ಥೆಯಿಂದ ಮಾನ್ಯತಾ ಪ್ರಮಾಣಪತ್ರ ಲಭಿಸಿರುವುದು ಅತ್ಯಂತ ಸಂತಸದ ಸಂಗತಿ ಎಂದು ಬೆಳಗಾವಿ ಹುಕ್ಕೇರಿ ಹಿರೇಮಠದ ಡಾ. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹರ್ಷ ವ್ಯಕ್ತಪಡಿಸಿದ್ದಾರೆ.

ಆಯುರ್ವೇದ, ಪಂಚಕರ್ಮ, ಪ್ರಕೃತಿ ಹಾಗೂ ಯೋಗ ಸೇರಿದಂತೆ ಪರಿಸರಸ್ನೇಹಿ ಚಿಕಿತ್ಸಾ ವಿಧಾನಗಳನ್ನು ಒಂದೇ ಸೂರಿನಡಿ ಒದಗಿಸುತ್ತಿರುವ ಡಾ. ವೆಂಕಟರಮಣ ಹೆಗಡೆ ಹಾಗೂ ಅವರ ಬಳಗದ ಸೇವೆ ಶ್ಲಾಘನೀಯವಾಗಿದೆ. ನಿಸರ್ಗಮನೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದವರು ಆರೋಗ್ಯ ಸುಧಾರಿಸಿಕೊಂಡು ನಿರೋಗಿಗಳಾಗಿ ಮರಳುವುದನ್ನು ನಮ್ಮ ಅನುಭವದಲ್ಲಿಯೂ ಕಂಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಆರೋಗ್ಯ ಸೇವೆಯಲ್ಲಿ ಗುಣಮಟ್ಟ ಹಾಗೂ ವಿಶ್ವಾಸಕ್ಕೆ ಆದ್ಯತೆ ನೀಡುತ್ತಿರುವ ನಿಸರ್ಗಮನೆಗೆ ರಾಷ್ಟ್ರೀಯ ಮಾನ್ಯತೆ ದೊರೆತಿರುವುದು ಸಂಸ್ಥೆಯ ಸೇವೆಗೆ ಸಂದ ಗೌರವವಾಗಿದೆ. ಈ ಸಾಧನೆಗಾಗಿ ಡಾ. ವೆಂಕಟರಮಣ ಹೆಗಡೆ ಹಾಗೂ ಅವರ ಇಡೀ ಬಳಗಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಡಾ. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಬ್ಯಾಲೆಟ್ ಪೇಪರ್‌ನಲ್ಲೇ ಕಾಂಗ್ರೆಸ್ ಸೋತಿದೆ, ಪತನದ ದಿನಗಳು ಹತ್ತಿರ ಬರ್ತಿದೆ: ನಿಖಿಲ್ ಕುಮಾರಸ್ವಾಮಿ

Spread the loveರಾಮನಗರ: ಕಾಂಗ್ರೆಸ್  ಇವಿಎಂ ಮೇಲೆ ಅನುಮಾನ ಪಟ್ಟು, ಬ್ಯಾಲೆಟ್ ಪೇಪರ್  ಚುನಾವಣೆ ಬೇಕು ಅಂತಿದ್ದರು. ಈಗ ಬ್ಯಾಲೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ