Breaking News

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯದಲ್ಲಿ ಚೇತರಿಕೆ ಇಲ್ಲ

Spread the love

ನವದೆಹಲಿ: ಸೋಮವಾರ ಕೊರೊನಾ ಸೋಂಕು ಹಿನ್ನೆಲೆ ಆಸ್ಪತ್ರೆ ಸೇರಿದ ಮಾಜಿ ರಾಷ್ಟ್ರಪತಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿಲ್ಲ ಎಂದು ಸೇನಾ ಆರ್. ಆರ್. ಆಸ್ಪತ್ರೆ ಬುಲೆಟಿನ್ ಹೊರಡಿಸಿದೆ.

ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಮುಂದುವರೆದಿದೆ. ಅವರ ದೇಹದಲ್ಲಿ ರಕ್ತ ಚಲನೆ, ಹೃದಯಬಡಿತ ಸಾಧಾರಣ ಸ್ಥಿತಿಯಲ್ಲಿದ್ದು ವೆಂಟಿಲೇಟರ್​ ಮೂಲಕ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಆರ್. ಆರ್. ಆಸ್ಪತ್ರೆಯ ಬುಲೆಟಿನ್​ನಲ್ಲಿ ಹೇಳಲಾಗಿದೆ.

ಕೊರೊನಾ ಸೋಂಕು ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಪ್ರಣಬ್ ಅವರಿಗೆ ಬ್ರೈನ್ ಕ್ಲಾಟ್ ಸರ್ಜರಿ ಮಾಡಲಾಗಿದ್ದು ಸರ್ಜರಿ ನಂತರ ಆರೋಗ್ಯ ಸ್ಥಿತಿ ಗಂಭೀರವಾಗಿದೆ, ಚೇತರಿಕೆ ಕಂದು ಬಂದಿಲ್ಲ ಎಂದು ಆಸ್ಪತ್ರೆ ಹೇಳಿದೆ. ದೇಶದ ಹಲವು ಗಣ್ಯರು ಪ್ರಣಬ್ ಅವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

 


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ