Breaking News

ಗೋಕಾಕ ರೇಲ್ವೆ ನಿಲ್ದಾಣ ಹತ್ತಿರ ಟ್ರಾಫಿಕ್ ಜಾಮ್

Spread the love

ಗೋಕಾಕ: Gokak Railway Station ಸಮೀಪದ ರೇಲ್ವೆ ಬ್ರಿಜ್ ಬಳಿ ಟ್ರಕ್‌ ಕೆಟ್ಟು ನಿಂತ ಪರಿಣಾಮ ಇಂದು ಭಾರಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದ ಘಟನೆ ನಡೆದಿದೆ.
ರಸ್ತೆಯ ಮಧ್ಯದಲ್ಲಿ ಟ್ರಕ್‌ ಕೆಟ್ಟು ನಿಂತಿದ್ದರಿಂದ ಎರಡೂ ಬದಿಗಳಲ್ಲೂ ವಾಹನಗಳ ಸಾಲು ಉಂಟಾಗಿ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತು. ವಿಶೇಷವಾಗಿ ಕೆಲಸಕ್ಕೆ ತೆರಳುತ್ತಿದ್ದವರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಗಂಟೆಗಳ ಕಾಲ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡರು.
ಘಟನೆ ನಡೆದ ನಂತರವೂ ಸ್ಥಳಕ್ಕೆ ಪೋಲಿಸ್ ಅಧಿಕಾರಿಗಳು ತಕ್ಷಣ ಆಗಮಿಸದ ಹಿನ್ನೆಲೆಯಲ್ಲಿ ವಾಹನ ಸವಾರರು ಅಸಮಾಧಾನ ವ್ಯಕ್ತಪಡಿಸಿದರು. ಸಂಚಾರ ನಿಯಂತ್ರಣಕ್ಕೆ ಯಾವುದೇ ವ್ಯವಸ್ಥೆ ಇಲ್ಲದ ಕಾರಣ ಪರಿಸ್ಥಿತಿ ಮತ್ತಷ್ಟು ಗಂಭೀರಗೊಂಡಿತು.


Spread the love

About Laxminews 24x7

Check Also

ಬ್ಯಾಲೆಟ್ ಪೇಪರ್‌ನಲ್ಲೇ ಕಾಂಗ್ರೆಸ್ ಸೋತಿದೆ, ಪತನದ ದಿನಗಳು ಹತ್ತಿರ ಬರ್ತಿದೆ: ನಿಖಿಲ್ ಕುಮಾರಸ್ವಾಮಿ

Spread the loveರಾಮನಗರ: ಕಾಂಗ್ರೆಸ್  ಇವಿಎಂ ಮೇಲೆ ಅನುಮಾನ ಪಟ್ಟು, ಬ್ಯಾಲೆಟ್ ಪೇಪರ್  ಚುನಾವಣೆ ಬೇಕು ಅಂತಿದ್ದರು. ಈಗ ಬ್ಯಾಲೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ