Breaking News

ನೀಟ್‌ ಪ್ರಕರಣದ ಕಿಂಗ್‌ಪಿನ್‌ ರಸಾಯನಶಾಸ್ತ್ರ ಉಪನ್ಯಾಸಕ ಅರೆಸ್ಟ್‌

Spread the love

ನವದೆಹಲಿ: ನೀಟ್‌ ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ  ಪ್ರಕರಣದ ತನಿಖೆ ಹೊಣೆ ಹೊತ್ತಿರುವ ಕೇಂದ್ರೀಯ ತನಿಖಾ ದಳ ಸ್ಫೋಟಕ ರಹಸ್ಯಗಳನ್ನು ಬಲಿಗೆಳೆಯುತ್ತಿದೆ. ಇದೆಲ್ಲದರ ಮಧ್ಯೆ ಇಂದು (ಶುಕ್ರವಾರ) ಪ್ರಕರಣದ ಕಿಂಗ್‌ ಪಿನ್‌ ಕೂಡ ಆಗಿರುವ ರಸಾಯನಶಾಸ್ತ್ರ ಉಪನ್ಯಾಸಕನೊಬ್ಬನನ್ನ ಸಿಬಿಐ  ಬಂಧಿಸಿದೆ.

ಬಂಧಿತ ಆರೋಪಿಯನ್ನು ಪಿ.ವಿ. ಕುಲಕರ್ಣಿ ಎಂದು ಗುರುತಿಸಲಾಗಿದ್ದು, ರಸಾಯನಶಾಸ್ತ್ರ ಉಪನ್ಯಾಸಕರಾಗಿದ್ದಾರೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ  ಪರವಾಗಿ ಪರೀಕ್ಷಾ ಪ್ರಕ್ರಿಯೆಲ್ಲಿ ಕುಲಕರ್ಣಿ ಭಾಗಿಯಾಗಿದ್ದರು, ಜೊತೆಗೆ ಪ್ರಶ್ನೆಪತ್ರಿಕೆಗಳನ್ನ ಪರಿಶೀಲಿಸುವುದಕ್ಕೂ ಇವರಿಗೆ ಅವಕಾಶವಿತ್ತು ಎಂದು ಹೇಳಲಾಗಿದೆ.

ಕಳೆದ ಏಪ್ರಿಲ್‌ ಕೊನೇ ವಾರದಲ್ಲಿ ಕುಲಕರ್ಣಿ  ಮತ್ತೊಬ್ಬ ಆರೋಪಿ ಮನೀಶಾ ವಾಘ್ಮರೆ ಸಹಾಯದಿಂದ ವಿದ್ಯಾರ್ಥಿಗಳನ್ನ ತಯಾರು ಮಾಡಿದ್ದಾರೆ. ಆರೋಪಿಯು ಪುಣೆಯಲ್ಲಿರುವ ತನ್ನ ನಿವಾಸದಲ್ಲಿ ಆಯ್ದ ಕೆಲ ವಿದ್ಯಾರ್ಥಿಗಳಿಗೆ ಮಾತ್ರ ವಿಶೇಷ ತರಗತಿಗಳನ್ನ ನಡೆಸುತ್ತಿದ್ದರು ಎಂಬುದು ತನಿಖೆ ವೇಳೆ ಬಹಿರಂಗವಾಗಿದೆ ಎಂದು ಸಿಬಿಐ ಹೇಳಿದೆ.

ಈ ವಿಶೇಷ ತರಗತಿ ನಡೆಸುವ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಪ್ರಶ್ನೆಗಳು, ಉತ್ತರ ಆಯ್ಕೆಗಳು ಮತ್ತು ಸರಿಯಾದ ಉತ್ತರಗಳನ್ನೇ ಡಿಕ್ಟೇಟ್‌ ಮಾಡಿದ್ದರು. ಅಲ್ಲದೇ ಪ್ರಶ್ನೋತ್ತರಗಳನ್ನು ತಮ್ಮ ನೋಟ್‌ ಪುಸ್ತಕದಲ್ಲಿ ಬರೆದುಕೊಂಡಿದ್ದು, ಅವುಗಳನ್ನ ವಿದ್ಯಾರ್ಥಿಗಳಿಗೆ ನೀಡಿದ್ದರು. ಪಿ.ವಿ ಕುಲಕರ್ಣಿ ಕೈಬರಹದ ಪ್ರಶ್ನೆಗಳು ಮೇ 3 ರಂದು ನಡೆದ NEET UG 2026 ಪ್ರಶ್ನೆ ಪತ್ರಿಕೆಗೆ ನಿಖರವಾಗಿ ಹೊಂದಿಕೆಯಾಗಿವೆ ಎಂಬುದನ್ನೂ ಸಿಬಿಐ ತನಿಖೆ ಬಹಿರಂಗಪಡಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಪುರ, ಗುರುಗ್ರಾಮ್, ನಾಸಿಕ್, ಪುಣೆ ಮತ್ತು ಅಹಲ್ಯಾನಗರದಿಂದ ಇದುವರೆಗೆ ಏಳು ಆರೋಪಿಗಳನ್ನು ಸಿಬಿಐ ಬಂಧಿಸಿದೆ.


Spread the love

About Laxminews 24x7

Check Also

ಪತಿಗಿಂತ ಹೆಚ್ಚು ದುಡಿಯುವ ಪತ್ನಿಗೆ ಪತಿ ಜೀವನಾಂಶ ನೀಡಬೇಕಿಲ್ಲ: ಹೈಕೋರ್ಟ್‌

Spread the loveಬೆಂಗಳೂರು: ಪತಿಗಿಂತ  ಹೆಚ್ಚು ದುಡಿಯುವ ಪತ್ನಿಗೆ  ಜೀವನಾಂಶ ನೀಡಬೇಕಿಲ್ಲ ಎಂದು ನ್ಯಾ. ಡಾ. ಚಿಲ್ಲಕೂರ್ ಸುಮಲತಾ ಅವರಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ