ನವದೆಹಲಿ: ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಎನ್ಟಿಎಗೆ ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕೋರ್ಟ್ ಉನ್ನತಮಟ್ಟದ ಮೇಲ್ವಿಚಾರಣಾ ಸಮಿತಿಗಳ ಹೊರತಾಗಿಯೂ ಇಷ್ಟು ದೊಡ್ಡ ಪ್ರಮಾದ ಹೇಗೆ ಸಂಭವಿಸಿತು ಎಂದು ಪ್ರಶ್ನೆ ಮಾಡಿದೆ. ನಾವು ಯುವಜನರನ್ನು ನಿರಾಸೆಗೊಳಿಸಬಾರದು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ಕೊಟ್ಟಿದೆ.
ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಸರ್ಕಾರವು ಯುವಜನರ ಆತಂಕಗಳ ಬಗ್ಗೆ ಗಂಭೀರವಾಗಿ ಕಾಳಜಿ ವಹಿಸುತ್ತಿದೆ. ಯಾವುದೇ ಲೋಪವಾಗದಂತೆ ನೋಡಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ವೈಯಕ್ತಿಕವಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.
ಇತ್ತ ನೀಟ್ ವಿದ್ಯಾರ್ಥಿಗಳಿಗೆ ದೆಹಲಿ ಸರ್ಕಾರ ಬಿಗ್ ರಿಲೀಫ್ ಕೊಟ್ಟಿದೆ. ದೆಹಲಿ ಸಿಎಂ ರೇಖಾ ಗುಪ್ತ ಜೂನ್ 21ರಂದು ನಡೆಯುವ ನೀಟ್ ಪರೀಕ್ಷೆಗೆ ಅಭ್ಯರ್ಥಿಗಳಿಗೆ ಉಚಿತ್ ಬಸ್ ಪ್ರಯಾಣ ಘೋಷಿಸಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಯಾವುದೇ ವಿದ್ಯಾರ್ಥಿ ಪರೀಕ್ಷೆ ದಿನ ಅನಾನುಕೂಲತೆ ಎದುರಿಸಬಾರದು. ಕಠಿಣ ಪರಿಶ್ರಮ ಮತ್ತು ದೃಢಸಂಕಲ್ಪ ಅವರನ್ನು ಯಶಸ್ಸಿಗೆ ಕೊಂಡೊಯ್ಯಲಿ ಎಂದು ಹಾರೈಸಿದ್ದಾರೆ.
Laxmi News 24×7