Breaking News

ಅಧಿಕಾರಿಗಳ ನಿರ್ಲಕ್ಷ್ಯ – ಶಾಲಾ ಮಕ್ಕಳಿಂದಲೇ ರಸ್ತೆ ಗುಂಡಿ ದುರಸ್ತಿ

Spread the love

ಕಲಬುರಗಿ: ರಸ್ತೆ ಗುಂಡಿಗಳ ಸರಿಮಾಡಲು ಅಧಿಕಾರಿಗಳು ನಿರ್ಲಕ್ಷ್ಯ ತೋರಿದ ಹಿನ್ನೆಲೆ ಶಾಲಾ ವಿದ್ಯಾರ್ಥಿಗಳೇ ಮಣ್ಣು ಕಲ್ಲುಗಳಿಂದ ರಸ್ತೆ ಗುಂಡಿಗಳನ್ನ ಮುಚ್ಚಿರುವ ಘಟನೆ ಕಲಬುರಗಿ  ಜಿಲ್ಲೆಯ ಕಮಲಾಪುರ ತಾಲೂಕಿನ ಕಾಳಮಂದರಗಿ ಗ್ರಾಮದಲ್ಲಿ ನಡೆದಿದೆ.

ಕಾಳಮಂದರಗಿಯಿಂದ ಬೀದರ್‌ನ ಬಸವಕಲ್ಯಾಣ ತಾಲೂಕಿಗೆ ಹೋಗುವ ರಸ್ತೆಯಲ್ಲಿ ತುಗ್ಗು ಗುಂಡಿಗಳು ಹೆಚ್ಚಾಗಿದ್ದ ಹಿನ್ನೆಲೆ ಸೈಕಲ್, ಬಸ್ ಸೇರಿ ಇತರೆ ವಾಹನಗಳ ಸಂಚಾರಕ್ಕೆ ಅನಾನೂಕುಲವಾಗಿತ್ತು. ಸಮಸ್ಯೆ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಏಷ್ಟು ಬಾರಿ ಮನವಿ ಮಾಡಿದ್ದರೂ ರಸ್ತೆ ದುರಸ್ತಿ ಮಾಡಿರಲಿಲ್ಲ. ಇದರಿಂದ ಬೇಸತ್ತ ಗ್ರಾಮದ ಶಾಲೆಯ ಮಕ್ಕಳು ಭಾನುವಾರ ಶಾಲೆಗೆ ರಜೆ ಇದ್ದ ಹಿನ್ನೆಲೆ ರಸ್ತೆ ಗುಂಡಿ ಮುಚ್ಚುವ ಕಾರ್ಯ ಮಾಡಿದ್ದಾರೆ.

ಕಾಳಮಂದರಗಿ ಶಾಲಾ ಮಕ್ಕಳ ಈ ಕೆಲಸ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿದ್ಯಾರ್ಥಿಗಳ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.


Spread the love

About Laxminews 24x7

Check Also

22 ವರ್ಷ ಹಳೆಯ NASA ಉಪಗ್ರಹ ಭೂಮಿಗೆ ವಾಪಸ್- ಬೆಂಗಳೂರಿನ ಮೇಲೂ ಬೀಳಲಿದೆಯೇ ಅವಶೇಷ?

Spread the love ವಾಷಿಂಗ್ಟನ್‌: ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾಗೆ ಸೇರಿದ 22 ವರ್ಷ ಹಳೆಯ ಉಪಗ್ರಹವೊಂದು ಇಂದು ಭೂಮಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ