Breaking News

ಅನಾರೋಗ್ಯದಿಂದ ಬಳಲುತ್ತಿದ್ದ ಒಂದೂವರೆ ವರ್ಷದ ಮಗು ಚಿಕಿತ್ಸೆ ಫಲಿಸದೇ ಸಾವು

Spread the love

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಒಂದೂವರೆ ವರ್ಷದ ಮಗು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ನಗರೂರಿನಲ್ಲಿ ನಡೆದಿದೆ.

ಚಾರ್ವಿಕ @ ದಿಯಾ ಮೃತ ಮಗು. ಚಾರ್ವಿಕ ಚಿತ್ರದುರ್ಗದ ಯಳಗೂಡು ನಿವಾಸಿಗಳಾದ ಸುಪ್ರಿತ ಹಾಗೂ ಪ್ರದೀಪ್ ದಂಪತಿಯ ಪುತ್ರಿಯಾಗಿದ್ದು, ಅಜ್ಜಿ ರೇಖಾ ಹಾಗೂ ತಾತ ಗುರು ಅವರ ಮನೆಯಲ್ಲಿ ಸಾಕಿಕೊಂಡಿದ್ದರು. ಮಗುವನ್ನ ಹಾಲು ಬಿಡಿಸುವ ಉದ್ದೇಶದಿಂದ ಅಜ್ಜಿ ತಾತನ ಮನೆಯಲ್ಲಿ ಬಿಡಲಾಗಿತ್ತು. ಮೂರು ದಿನದ ಹಿಂದೆ ಕಫ ಜಾಸ್ತಿಯಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಐಸಿಯುನಲ್ಲಿ ಚಿಕಿತ್ಸೆ ಕೊಡಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮಗು ಮಗು ಮೃತಪಟ್ಟಿದೆ. ಘಟನೆ ಸಂಬಂಧ ನೆಲಮಂಗಲ ಶವಗಾರಕ್ಕೆ ಮಗು ಮೃತದೇಹ ರವಾನಿಸಲಾಗಿದೆ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸರು ಯುಡಿಆರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಬೆಂಗ್ಳೂರು ಏರ್‌ಪೋರ್ಟ್‌ ರಸ್ತೆಯಲ್ಲಿ ಸರಣಿ ಅಪಘಾತ – ತಪ್ಪಿದ ಭಾರೀ ಅನಾಹುತ

Spread the loveಬೆಂಗಳೂರು: ನಗರದ ಏರ್‌ಪೋರ್ಟ್‌ ರಸ್ತೆಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್‌ ಭಾರೀ ಅನಾಹುತವೊಂದು ತಪ್ಪಿದೆ. ಕಳೆದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ