Breaking News

ನೇಪಾಳ ಜಲಪ್ರಳಯ – ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್ ಆದ 54 ಮಂದಿ ಕನ್ನಡಿಗರು

Spread the love

ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಭೀಕರ ಜಲಪ್ರಳಯದ ನಡುವೆ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರಿಗೆ  ಕೊನೆಗೂ ನೆಮ್ಮದಿ ಸಿಕ್ಕಿದೆ. ನೇಪಾಳ ಪ್ರವಾಹದಲ್ಲಿ ಸಿಲುಕಿದ್ದ 54 ಮಂದಿ ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ಸಾಗಿದ್ದಾರೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕನ್ನಡಿಗರು, ನೇಪಾಳದಲ್ಲಿ ಎದುರಾದ ಭೀಕರ ಅನುಭವವನ್ನು ಹಂಚಿಕೊಂಡಿದ್ದಾರೆ. ಹಾವೇರಿ, ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಒಟ್ಟು 54 ಮಂದಿ ಪ್ರವಾಸಿಗರು ಆಗಸ್ಟ್ 23ರಂದು ನೇಪಾಳ ಪ್ರವಾಸ ಕೈಗೊಂಡಿದ್ದರು. ಆದರೆ ಆಗಸ್ಟ್ 26ರಂದು ನೇಪಾಳ-ಟಿಬೆಟ್ ಗಡಿ ಭಾಗದಲ್ಲಿ ಸಂಭವಿಸಿದ ಭೀಕರ ಫ್ಲ್ಯಾಶ್ ಫ್ಲಡ್ ಪ್ರವಾಸಿಗರಲ್ಲಿ ಆತಂಕ ಸೃಷ್ಟಿಸಿತ್ತು. ಭೋಟೆ ಕೋಶಿ ನದಿ ಪ್ರದೇಶದಲ್ಲಿ ಪ್ರವಾಹದ ರಭಸಕ್ಕೆ ರಸ್ತೆಗಳು, ಸೇತುವೆಗಳು ಹಾಗೂ ಹಲವು ಮೂಲಸೌಕರ್ಯಗಳು ಕೊಚ್ಚಿಹೋಗಿದ್ದವು. ಪ್ರವಾಹದಿಂದ ಸಂಪರ್ಕ ವ್ಯವಸ್ಥೆ ಅಸ್ತವ್ಯಸ್ತಗೊಂಡಿದ್ದರಿಂದ ಕುಟುಂಬಸ್ಥರು ಆತಂಕಕ್ಕೊಳಗಾಗಿದ್ದರು.

ಕರ್ನಾಟಕ ಸರ್ಕಾರವೂ ನೇಪಾಳದಲ್ಲಿ ಸಿಲುಕಿದ್ದ ರಾಜ್ಯದವರ ಸುರಕ್ಷಿತ ವಾಪಸಾತಿಗೆ ಕ್ರಮ ಕೈಗೊಂಡಿತ್ತು. ಇದೀಗ ಉತ್ತರ ಪ್ರದೇಶದ ಗೋರಖ್‌ಪುರದಿಂದ ಬೆಂಗಳೂರಿಗೆ ಆಗಮಿಸಿದ 54 ಮಂದಿ ಕನ್ನಡಿಗರು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ತಾಯ್ನಾಡಿಗೆ ಮರಳಿದ್ದಾರೆ. ಪ್ರವಾಹದ ಭೀಕರತೆಯಿಂದ ಪಾರಾಗಿ ಸುರಕ್ಷಿತವಾಗಿ ಮನೆ ಸೇರಿರುವುದರಿಂದ ಪ್ರವಾಸಿಗರು ಹಾಗೂ ಅವರ ಕುಟುಂಬಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ದೇವರ ದಯೆಯಿಂದ ನಾವು ಮತ್ತೆ ಬದುಕಿ ಬಂದೆವು. ಇದು ನಮ್ಮ ಪುನರ್ಜನ್ಮ ಅಂತ ಕನ್ನಡಿಗರು ಅಲ್ಲಿನ ಅನುಭವಗಳನ್ನು ಹಂಚಿಕೊಂಡಿದ್ದಾರೆ.

ಅರ್ಧ ಗಂಟೆಯ ಟೀ ಬ್ರೇಕ್‌ ಜೀವ ಉಳಿಸಿತು:
ಪ್ರವಾಹದ ದಾರಿಯಲ್ಲಿ ಸಾಗುತ್ತಿದ್ದ ಕನ್ನಡಿಗರು ಮಾರ್ಗ ಮಧ್ಯೆ ಟೀ ಕುಡಿಯಲು ತೆರಳಿ ಸುಮಾರು ಅರ್ಧ ಗಂಟೆ ತಡವಾಗಿದ್ದರು. ಇದೇ ಸಮಯದಲ್ಲಿ ಮುಂದೆ ಪ್ರವಾಹ ಸಂಭವಿಸಿರುವ ಮಾಹಿತಿ ಬಂದಿದೆ. ಹೀಗಾಗಿ ಸಮಯಕ್ಕೆ ಸರಿಯಾಗಿ ಮುಂದೆ ಹೋಗಿದ್ದರೆ ಪ್ರವಾಹಕ್ಕೆ ಸಿಲುಕುವ ಸಾಧ್ಯತೆ ಇತ್ತು ಎಂದು ಪ್ರವಾಸಿಗರು ತಮ್ಮ ಅನುಭವ ಹಂಚಿಕೊಂಡಿದ್ದಾರೆ.


Spread the love

About Laxminews 24x7

Check Also

ಬ್ಯಾಲೆಟ್ ಪೇಪರ್‌ನಲ್ಲೇ ಕಾಂಗ್ರೆಸ್ ಸೋತಿದೆ, ಪತನದ ದಿನಗಳು ಹತ್ತಿರ ಬರ್ತಿದೆ: ನಿಖಿಲ್ ಕುಮಾರಸ್ವಾಮಿ

Spread the loveರಾಮನಗರ: ಕಾಂಗ್ರೆಸ್  ಇವಿಎಂ ಮೇಲೆ ಅನುಮಾನ ಪಟ್ಟು, ಬ್ಯಾಲೆಟ್ ಪೇಪರ್  ಚುನಾವಣೆ ಬೇಕು ಅಂತಿದ್ದರು. ಈಗ ಬ್ಯಾಲೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ