Breaking News

ನೂತನ FM ಪ್ರಸರಣ ಕೇಂದ್ರ ಕಾರ್ಯಾರಂಭ; 2.85 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ

Spread the love

ಉಡುಪಿ: ಮಂಗಳೂರು ಆಕಾಶವಾಣಿಯ ಉಡುಪಿಯ ನೂತನ ಎಫ್‌ಎಂ  ಟ್ರಾನ್ಸ್‌ಮಿಷನ್ ಕೇಂದ್ರ ಕಾರ್ಯಾರಂಭಗೊಂಡಿದ್ದು, ಜಿಲ್ಲೆಯ ಜನರಿಗೆ ಆಕಾಶವಾಣಿಯ ಕಾರ್ಯಕ್ರಮಗಳು ಹಾಗೂ ಪ್ರಸಾರ ಸೇವೆಗಳು ಮತ್ತಷ್ಟು ಸುಲಭವಾಗಿ ಲಭ್ಯವಾಗಲಿವೆ.

ಸುಮಾರು 2.85 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಈ ನೂತನ ಪ್ರಸರಣ ಕೇಂದ್ರವು 1 ಕಿಲೋವ್ಯಾಟ್ ಸಾಮರ್ಥ್ಯ ಹೊಂದಿದ್ದು, 101.9 ಮೆಗಾಹರ್ಟ್ಸ್ ತರಂಗಾಂತರದಲ್ಲಿ ಎಫ್‌ಎಂ ಪ್ರಸಾರ ಸೇವೆ ಒದಗಿಸಲಿದೆ. ಸುಮಾರು 30 ಕಿ.ಮೀ. ವ್ಯಾಪ್ತಿಯಲ್ಲಿ ಪ್ರಸಾರ ಲಭ್ಯವಾಗಲಿದ್ದು, ಉಡುಪಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ಆಕಾಶವಾಣಿಯ ಕಾರ್ಯಕ್ರಮಗಳನ್ನು ಉತ್ತಮವಾಗಿ ಆಲಿಸಲು ಅನುಕೂಲವಾಗಲಿದೆ. ಕೇಂದ್ರ ರೈಲ್ವೆ ಹಾಗೂ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್  ಅವರು ಉಡುಪಿಯಲ್ಲಿ ನೂತನವಾಗಿ ನಿರ್ಮಿಸಲಾದ ಎಫ್‌ಎಂ ಪ್ರಸರಣ ಕೇಂದ್ರವನ್ನು ಉದ್ಘಾಟಿಸಿದರು.

ಇದಕ್ಕೂ ಮುನ್ನ ಉಡುಪಿ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು, ಬಳಿಕ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಮಹತ್ವದ ಮಾಹಿತಿ ಉಡುಪಿ ರೈಲ್ವೆ ನಿಲ್ದಾಣವನ್ನು ಸ್ಥಳೀಯ ಪಾರಂಪರಿಕ ಶೈಲಿಯಲ್ಲಿ ಮೇಲ್ದರ್ಜೆಗೇರಿಸುವುದರ ಜತೆಗೆ ಬೈಂದೂರು ರೈಲ್ವೆ ನಿಲ್ದಾಣದ ಅಭಿವೃದ್ಧಿಗೂ ಚಿಂತನೆ ನಡೆಸಲಾಗುವುದು. ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸುವ ಪ್ರಸ್ತಾವನೆಗೆ ಕರ್ನಾಟಕ, ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳ ಅನುಮತಿ ಅಗತ್ಯವಿದೆ. ಕರಾವಳಿ ಭಾಗದ ಪ್ರಮುಖ ರೈಲ್ವೆ ನಿಲ್ದಾಣವಾಗಿರುವ ಉಡುಪಿ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುವುದು. ಉಡುಪಿ ಪ್ರಮುಖ ಧಾರ್ಮಿಕ ಹಾಗೂ ಶಿಕ್ಷಣ ಕೇಂದ್ರವಾಗಿರುವುದರಿಂದ, ಸ್ಥಳೀಯ ಪಾರಂಪರಿಕ ಶೈಲಿಯನ್ನು ಅಳವಡಿಸಿಕೊಂಡು ರೈಲ್ವೆ ನಿಲ್ದಾಣವನ್ನು ಅಭಿವೃದ್ಧಿಪಡಿಸುವ ಉದ್ದೇಶವಿದೆ ಎಂದರು.

ಬೈಂದೂರು ರೈಲ್ವೆ ನಿಲ್ದಾಣದ ಅಭಿವೃದ್ಧಿಯ ಬಗ್ಗೆಯೂ ಚಿಂತನೆ ನಡೆಸಲಾಗುವುದು. ಬೆಂಗಳೂರು, ಮಂಗಳೂರು ಹಾಗೂ ಮಡಗಾಂವ್ ನಡುವೆ ಸಂಚರಿಸುವ ವಂದೇ ಭಾರತ್ ರೈಲು ಕರಾವಳಿ ಭಾಗದ ಜನರ ಪ್ರಯಾಣಕ್ಕೆ ಹೆಚ್ಚಿನ ಅನುಕೂಲ ಕಲ್ಪಿಸಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

10 ವರ್ಷದ ಪ್ರೀತಿಗೆ ಮೋಸ – ಎರಡು ಮಕ್ಕಳ ತಾಯಿಯನ್ನ ಗುಟ್ಟಾಗಿ ಮದುವೆಯಾದ ಸದಾಕತ್!

Spread the loveಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದ ವ್ಯಕ್ತಿಯೊಬ್ಬ ಗುಟ್ಟಾಗಿ ಎರಡು ಮಕ್ಕಳ ತಾಯಿಯನ್ನು ವಿವಾಹವಾಗಿ ಪತ್ನಿಗೆ ಮೋಸ ಮಾಡಿರುವ ಪ್ರಕರಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ