Breaking News

ಕೃಷ್ಣಾ ನದಿಗೆ ಜೀವಕಳೆ: ಹಿಪ್ಪರಗಿ ಬ್ಯಾರೇಜ್‌ನ 16 ಗೇಟ್‌ ಓಪನ್‌

Spread the love

ಬಾಗಲಕೋಟೆ: ಮಹಾರಾಷ್ಟ್ರದ ಪಶ್ಚಿಮ ಘಟ್ಟಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷ್ಣಾ ನದಿಗೆಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ತೀವ್ರ ಬೇಸಿಗೆಯಿಂದಾಗಿ ಸಂಪೂರ್ಣ ಬರಿದಾಗಿದ್ದ ಕೃಷ್ಣಾ ನದಿಗೆ ಈಗ ದಿಢೀರ್ ಜೀವಕಳೆ ಬಂದಂತಾಗಿದ್ದು, ನದಿ ತೀರದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಜಮಖಂಡಿ ತಾಲ್ಲೂಕಿನ ಪ್ರಮುಖ ಜಲಮೂಲವಾದ ಹಿಪ್ಪರಗಿ ಬ್ಯಾರೇಜ್‌ಗೆನೀರಿನ ಒಳಹರಿವು ಗಂಟೆಯಿಂದ ಗಂಟೆಗೆ ಹೆಚ್ಚುತ್ತಿದೆ. ಪ್ರಸ್ತುತ ಒಳಹರಿವು 30,000 ಕ್ಯೂಸೆಕ್ ಇದ್ದರೆ 22,000 ಕ್ಯೂಸೆಕ್‌ ಹೊರ ಹರಿವಿದೆ. ನದಿಗೆ ಬರುತ್ತಿರುವ ನೀರಿನ ಪ್ರಮಾಣವನ್ನು ನಿಯಂತ್ರಿಸಲು ಬ್ಯಾರೇಜ್‌ನ ಒಟ್ಟು 22 ಗೇಟ್‌ಗಳ ಪೈಕಿ ಈಗಾಗಲೇ 16 ಗೇಟ್‌ಗಳನ್ನು ತೆರೆದು ನೀರನ್ನು ಹೊರಗೆ ಬಿಡಲಾಗುತ್ತಿದೆ. 

ನದಿಯಲ್ಲಿ ನೀರಿನ ಮಟ್ಟ ದಿಢೀರ್‌ ಆಗಿ ಏರಿಕೆಯಾಗುತ್ತಿರುವುದರಿಂದ ಬಾಗಲಕೋಟೆ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ನದಿ ತೀರದ ಗ್ರಾಮಗಳ ಜನರು ಮತ್ತು ಜಾನುವಾರುಗಳು ಜಾಗರೂಕರಾಗಿರಬೇಕು ಹಾಗೂ ನದಿಗೆ ಇಳಿಯಬಾರದು ಎಂದು ಸೂಚಿಸಲಾಗಿದೆ.

ಪ್ರವಾಹದ ಭೀತಿಯಿರುವುದರಿಂದ ರೈತರು ನದಿ ತೀರದಲ್ಲಿ ಅಳವಡಿಸಿರುವ ತಮ್ಮ ಎಲೆಕ್ಟ್ರಿಕ್ ಮೋಟರ್ ಪಂಪ್‌ಸೆಟ್‌ಗಳನ್ನು ತಕ್ಷಣವೇ ತೆರವುಗೊಳಿಸುವಂತೆ ಆದೇಶಿಸಲಾಗಿದೆ.

ಕಳೆದ ಕೆಲವು ದಿನಗಳಿಂದ ನೀರಿನ ಅಭಾವ ಎದುರಿಸುತ್ತಿದ್ದ ಜಮಖಂಡಿ ಭಾಗದ ರೈತರಿಗೆ ಕೃಷ್ಣೆಯ ಒಡಲು ತುಂಬುತ್ತಿರುವುದು ತೀವ್ರ ಸಂತಸ ತಂದಿದೆಯಾದರೂ, ಪ್ರವಾಹದ ಮುನ್ನೆಚ್ಚರಿಕೆಯನ್ನೂ ವಹಿಸಬೇಕಾಗಿದೆ.

Spread the love

About Laxminews 24x7

Check Also

ತೊಂದರೆ ಆದ್ರೆ ಮಾತ್ರ ಕಾಯ್ದೆ ತೋರಿಸುತ್ತೀರಿ, ಅವಘಡ ಆಗಿದ್ರೆ ಯಾರು ಹೊಣೆ? – ದೇವಿಗೆರೆಯಲ್ಲಿ ಗಣೇಶ ವಿಸರ್ಜನೆಗೆ ಡಿಸಿ ಅಸಮಾಧಾನ

Spread the loveಹಾಸನ: ದೇವಿಗೆರೆಯಲ್ಲಿ ಗಣೇಶ ವಿಸರ್ಜನೆ  ವೇಳೆ ಯಾವುದಾದರೂ ಅವಘಡ ಸಂಭವಿಸಿದ್ದರೆ ಜಿಲ್ಲಾಡಳಿತ ಸಮಸ್ಯೆಗೆ ಸಿಲುಕುತ್ತಿತ್ತು. ಅದರ ಹೊಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ