Breaking News

ಸಾಂಬ್ರಾ ಗ್ರಾಮದಲ್ಲಿ ನೂತನ ಬೀದಿ ದೀಪಗಳು ಹಾಗೂ “ಐ ಲವ್ ಸಾಂಬ್ರಾ” ನಾಮಫಲಕ ಉದ್ಘಾಟನೆ

Spread the love

ಬೆಳಗಾವಿ: ಗ್ರಾಮೀಣ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆಯಾಗಿ ಸಾಂಬ್ರಾ ಗ್ರಾಮದಲ್ಲಿ ನೂತನವಾಗಿ ಅಳವಡಿಸಲಾಗಿರುವ ಬೀದಿ ದೀಪಗಳು ಹಾಗೂ “ಐ ಲವ್ ಸಾಂಬ್ರಾ” ಎನ್ನುವ ನಾಮಫಲಕವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಕ್ರವಾರ ಸಂಜೆ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಗ್ರಾಮಗಳ ಅಭಿವೃದ್ಧಿಯೇ ರಾಜ್ಯದ ಸಮಗ್ರ ಅಭಿವೃದ್ಧಿಗೆ ಬುನಾದಿಯಾಗಿದ್ದು, ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ಸರ್ಕಾರ ವಿಶೇಷ ಆದ್ಯತೆ ನೀಡುತ್ತಿದೆ ಎಂದರು.

ಸಾಂಬ್ರಾ ಗ್ರಾಮದಲ್ಲಿಯೂ ರಸ್ತೆ, ಕುಡಿಯುವ ನೀರು, ಬೀದಿ ದೀಪಗಳು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ತಿಳಿಸಿದರು.

ಅದರ ಜೊತೆಗೆ ಗ್ರಾಮ ಪ್ರವೇಶ ಭಾಗದಲ್ಲಿ ಅಳವಡಿಸಲಾದ “ಐ ಲವ್ ಸಾಂಬ್ರಾ” ನಾಮಫಲಕವು ಗ್ರಾಮಕ್ಕೆ ವಿಶೇಷ ಗುರುತನ್ನು ನೀಡುವುದರ ಜೊತೆಗೆ ಯುವಕರಲ್ಲಿ ತಮ್ಮ ಊರಿನ ಬಗ್ಗೆ ಹೆಮ್ಮೆ ಹಾಗೂ ಆತ್ಮೀಯತೆಯನ್ನು ಹೆಚ್ಚಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಬಳಿಕ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಗ್ರಾಮದ ಶ್ರೀ ಶಂಭು ಮಹಾದೇವ ಮಂದಿರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ವೇಳೆ ದೇವಸ್ಥಾನ ಸಮಿತಿಯವರು ಹಾಗೂ ಗ್ರಾಮಸ್ಥರು ಸಚಿವರನ್ನು ಗೌರವಪೂರ್ವಕವಾಗಿ ಸನ್ಮಾನಿಸಿದರು.

ನಂತರ ಗ್ರಾಮದ ಅಭಿವೃದ್ಧಿ ಕಾಮಗಾರಿಗಳು, ಮುಂದಿನ ಯೋಜನೆಗಳು ಮತ್ತು ಜನರ ಅಗತ್ಯಗಳ ಕುರಿತು ಸ್ಥಳೀಯರೊಂದಿಗೆ ಚರ್ಚೆ ನಡೆಸಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಗ್ರಾಮದ ಹಿರಿಯರು, ಮಹಿಳೆಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು


Spread the love

About Laxminews 24x7

Check Also

ಕಬ್ಬಿನ ಬಿಲ್ ಬಾಕಿಗಾಗಿ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಎದುರು ರೈತ ಪ್ರತಿಭಟನೆ

Spread the loveಬೆಳಗಾವಿ: ಪ್ರಸಕ್ತ ಸಾಲಿನ ಕಬ್ಬಿನ ಬಿಲ್ ಬಾಕಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಶುಕ್ರವಾರ ಮಹಾನಗರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ