Breaking News

ಅಥಣಿಯಲ್ಲಿ ಬೀದಿ ನಾಯಿಗಳ ಪಾಲಾದ ನವಜಾತ ಶಿಶು!

Spread the love

ಚಿಕ್ಕೋಡಿ: ಮಾನವೀಯತೆಯನ್ನೇ ಬೆಚ್ಚಿಬೀಳಿಸುವ ಅಮಾನವೀಯ ಘಟನೆಯೊಂದು ಅಥಣಿ ಪಟ್ಟಣದ ಹೊರವಲಯದ ಕಾಗವಾಡ ರಸ್ತೆಯಲ್ಲಿ ಬೆಳಕಿಗೆ ಬಂದಿದೆ. ನವಜಾತ ಶಿಶುವೊಂದನ್ನು ರಸ್ತೆ ಪಕ್ಕದಲ್ಲಿ ಎಸೆದು ಹೋಗಿರುವ ಘಟನೆ ಸ್ಥಳೀಯರಲ್ಲಿ ತೀವ್ರ ಆಘಾತ ಮೂಡಿಸಿದೆ.

ರಸ್ತೆಯ ಪಕ್ಕದಲ್ಲಿ ಎಸೆದು ಹೋಗಿದ್ದ ನವಜಾತ ಶಿಶುವಿನ ದೇಹವನ್ನು ಬೀದಿ ನಾಯಿಗಳು ಎಳೆದಾಡಿ ತಿನ್ನುತ್ತಿದ್ದ ದೃಶ್ಯ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲಿಸಿದ ಸ್ಥಳೀಯರಿಗೆ ಮಗುವಿನ ತಲೆ ಹಾಗೂ ಒಂದು ಕಾಲು ಪತ್ತೆಯಾಗಿವೆ. ಈ ಕುರಿತು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಅಥಣಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಇನ್ಸ್‌ಪೆಕ್ಟರ್ ಲಕ್ಕಪ್ಪ ಅಗ್ನಿ ಅವರ ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ.

ನವಜಾತ ಶಿಶುವನ್ನು ರಸ್ತೆ ಪಕ್ಕದಲ್ಲಿ ಎಸೆದು ಹೋದವರು ಯಾರು? ಯಾವ ಕಾರಣಕ್ಕಾಗಿ ಈ ಕೃತ್ಯ ಎಸಗಲಾಗಿದೆ? ಎಂಬ ಹಲವು ಪ್ರಶ್ನೆಗಳು ಇದೀಗ ಉದ್ಭವಿಸಿವೆ. ಪ್ರಕರಣ ದಾಖಲಿಸಿಕೊಂಡಿರುವ ಅಥಣಿ ಪೊಲೀಸರು ಮಗುವಿನ ಗುರುತು ಹಾಗೂ ಘಟನೆಗೆ ಕಾರಣರಾದವರ ಪತ್ತೆಗಾಗಿ ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಡಿಸೆಂಬರ್ ಅಂತ್ಯಕ್ಕೆ ವಿಜಯಪುರದಲ್ಲಿ ವಿಮಾನ ಹಾರಾಟ – ಎಂ.ಬಿ ಪಾಟೀಲ್

Spread the loveವಿಜಯಪುರ: ಇದೇ ಡಿಸೆಂಬರ್ ಅಂತ್ಯದೊಳಗೆ ವಿಜಯಪುರದಲ್ಲಿ ವಿಮಾನ ಹಾರಾಟ ಪ್ರಾರಂಭಗೊಳ್ಳಲಿದೆ ಎಂದು ಸಚಿವ ಎಂ.ಬಿ ಪಾಟೀಲ್ ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ