Breaking News

ಮದುವೆಯಾದ ಎರಡೇ ತಿಂಗಳಿಗೆ ನವವಿವಾಹಿತೆ ಆತ್ಮಹತ್ಯೆ

Spread the love

ಶಿವಮೊಗ್ಗ: ಮದುವೆಯಾದ ಎರಡೇ ತಿಂಗಳಿಗೆ ನವಾವಿವಾಹಿತೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸೊರಬತಾಲೂಕಿನ ಹಣಜಿ ಗ್ರಾಮದಲ್ಲಿ ನಡೆದಿದೆ.

ಸ್ವಾತಿ (24) ಆತ್ಮಹತ್ಯೆಗೆ ಶರಣಾದ ಮಹಿಳೆ. ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಗ್ರಾಮದ ಸ್ವರೂಪ್‌ನನ್ನು ಸ್ವಾತಿ ಮದುವೆಯಾಗಿದ್ದಳು. ಗರ್ಭಿಣಿಯಾಗಿದ್ದ ಆಕೆಗೆ ಅನಾರೋಗ್ಯದ ಸಮಸ್ಯೆ ಕಾಣಿಸಿಕೊಂಡಿತ್ತು. 20 ದಿನಗಳ ಹಿಂದೆ ಹಣಜಿ ಗ್ರಾಮದ ತವರು ಮನೆಗೆ ಸ್ವಾತಿ ಬಂದಿದ್ದಳು.

ತಂದೆ ತಾಯಿ ಜಮೀನು ಕೆಲಸಕ್ಕೆ ಹೋದಾಗ ಸೀರೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಇದನ್ನು ಗಮನಿಸಿದ ಅಕ್ಕಪಕ್ಕದವರು ಹೊಲದಲ್ಲಿದ್ದ ಮೃತರ ತಂದೆ ತಾಯಿಗೆ ವಿಷಯ ತಿಳಿಸಿ, ಮನೆಯ ಬಾಗಿಲು ಮುರಿಯಲು ಮುಂದಾಗಿದ್ದಾರೆ. ಬಾಗಿಲು ಮುರಿದು ಸ್ವಾತಿಯನ್ನ ಸೀರೆ ಕುಣಿಕೆಯಿಂದ ಬಿಡಿಸಿ ಆಸ್ಪತ್ರೆಗೂ ರವಾನಿಸಿದ್ದಾರೆ. ಆದರೆ ಆಕೆಯನ್ನು ಉಳಿಸುವ ಪ್ರಯತ್ನ ವಿಫಲವಾಗಿದೆ. ಸ್ಥಳಕ್ಕೆ ಪೊಲೀಸರು  ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕುಟುಂಬದವರ ಮಾಹಿತಿಯಂತೆ ಆರೋಗ್ಯ ಸಮಸ್ಯೆಯಿಂದ ತುಂಬಾ ವಾಂತಿಯಾಗುತ್ತಿತ್ತು. ಸರಿಯಾಗಿ ಊಟ, ತಿಂಡಿ ಮಾಡುತ್ತಿರಲಿಲ್ಲ ಎನ್ನಲಾಗಿದೆ. ಸದ್ಯ ಇದೇ ಕಾರಣಕ್ಕೆ ಆಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.


Spread the love

About Laxminews 24x7

Check Also

ಬಿಡದಿ ಟೌನ್‌ಶಿಪ್, ನೈಸ್ ವಿರುದ್ಧ ದಳಪತಿ ಕಹಳೆ – ಸರ್ಕಾರದ ವಿರುದ್ಧ ಜೆಡಿಎಸ್ ನಾಯಕರು ಕೆಂಡ

Spread the loveಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ, ನೈಸ್ ರೋಡ್ ಟೋಲ್ ವಿರೋಧಿಸಿ ಫ್ರೀಡಂಪಾರ್ಕ್‌ನಲ್ಲಿ  ಇಂದು (ಆ.18) ಜೆಡಿಎಸ್  ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ