Breaking News

ಅನ್‌ಲಾಕ್‌ 3′ ಮಾರ್ಗಸೂಚಿ ಬಿಡುಗಡೆ: ಆಗಸ್ಟ್‌ ಅಂತ್ಯದವರೆಗೂ ಶಾಲಾ, ಕಾಲೇಜು ಇಲ್ಲ

Spread the love

ನವದೆಹಲಿ : ಕೊರೊನಾ ಸೋಂಕು ಹೆಚ್ಚುತ್ತಲೇ ಇರುವುದರಿಂದ ಆಗಸ್ಟ್‌ ಅಂತ್ಯದವರೆಗೂ ಶಾಲಾ, ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಗೃಹ ಸಚಿವಾಲಯವು ಬುಧವಾರ ಮೂರನೇ ಹಂತದ (ಅನ್‌ಲಾಕ್‌-3) ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಆಗಸ್ಟ್‌ 1ರಿಂದ ಇವು ಜಾರಿಗೆ ಬರಲಿವೆ.

ಸೋಂಕು ಪಸರಿಸದಂತೆ ತಡೆಯುವ ಸಲುವಾಗಿ ಈ ಹಿಂದೆ ಜಾರಿಗೊಳಿಸಿದ್ದ ‘ರಾತ್ರಿ ಕರ್ಫ್ಯೂ’ ರದ್ದುಪಡಿಸಲಾಗಿದೆ. ಕಂಟೈನ್‌ಮೆಂಟ್‌ ವಲಯವನ್ನು ಬಿಟ್ಟು ಉಳಿದೆಡೆ ಆಗಸ್ಟ್‌ 5ರಿಂದ ಜಿಮ್‌ ಹಾಗೂ ಯೋಗ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಇದಕ್ಕಾಗಿ ಕೇಂದ್ರ ಆರೋಗ್ಯ ಸಚಿವಾಲಯವು ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಜನರು ಗುಂಪು ಸೇರುವುದರ ಮೇಲಿದ್ದ ನಿರ್ಬಂಧ ಮುಂದುವರಿಸಲಾಗಿದೆ.ಹೀಗಾಗಿ ಮೆಟ್ರೊ ರೈಲು ಸೇವೆ, ಚಿತ್ರಮಂದಿರ, ಈಜುಕೊಳಗಳು, ಆಡಿಟೋರಿಯಂ ಹಾಗೂ ಬಾರ್‌ಗಳನ್ನು ತೆರೆಯಲು ಅನುಮತಿ ಕೊಟ್ಟಿಲ್ಲ.

ಕಂಟೈನ್‌ಮೆಂಟ್‌ ವಲಯಗಳಲ್ಲಿ ಆಗಸ್ಟ್‌ 31ರವರೆಗೂ ಲಾಕ್‌ಡೌನ್‌ ಮುಂದುವರಿಯಲಿದೆ. ಪರಿಸ್ಥಿತಿಯನ್ನು ಅವಲೋಕಿಸಿ ಇನ್ನಷ್ಟು ಕಠಿಣ ಲಾಕ್‌ಡೌನ್‌ ಜಾರಿಗೊಳಿಸುವ ಅಥವಾ ತೆರವುಗೊಳಿಸುವ ಅಧಿಕಾರವನ್ನು ರಾಜ್ಯಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಲಾಗಿದೆ. ಕ್ರೀಡಾ ಚಟುವಟಿಕೆಗಳು, ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಹಾಗೂಧಾರ್ಮಿಕ ಸಭೆ, ಸಮಾರಂಭಗಳ ಮೇಲಿನ ನಿರ್ಬಂಧ ಮುಂದುವರಿಯಲಿದೆ’ ಎಂದು ಗೃಹ ಸಚಿವಾಲಯವು ಅನ್‌ಲಾಕ್‌-3 ಕುರಿತ ಪ್ರಕಟಣೆಯಲ್ಲಿ ತಿಳಿಸಿದೆ.

‘ವಂದೇ ಭಾರತ್‌ ಮಿಷನ್‌ ಅಡಿಯಲ್ಲಿ ಅಂತರರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ಒಪ್ಪಿಗೆ ನೀಡಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದೂ ಹೇಳಲಾಗಿದೆ.

ಆಗಸ್ಟ್‌ 31ರವರೆಗೆ ಶಾಲಾ,ಕಾಲೇಜುಗಳು ಆರಂಭವಾಗುವುದಿಲ್ಲ. ರಾಜ್ಯಗಳ ಅಭಿಪ್ರಾಯಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ.
ಕೇಂದ್ರ ಗೃಹ ಸಚಿವಾಲಯ

***

ಸ್ವಾತಂತ್ರ್ಯ ದಿನಾಚರಣೆಗೆ ಅನುಮತಿ

ಆಗಸ್ಟ್‌ 15ರಂದು ದೇಶದೆಲ್ಲೆಡೆ ಸ್ವಾತಂತ್ರ್ಯ ದಿನವನ್ನು ಆಚರಿಸಲು ಒಪ್ಪಿಗೆ ನೀಡಲಾಗಿದೆ. ಈ ವೇಳೆ ಅಂತರ ಕಾಪಾಡಿಕೊಳ್ಳುವುದು, ಮುಖಗವಸು ಧರಿಸುವುದು ಸೇರಿದಂತೆ ಇತರ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಸೂಚಿಸಲಾಗಿದೆ.


Spread the love

About Laxminews 24x7

Check Also

ಗುಲ್ಬರ್ಗಾ ವಿವಿ ಅತಿ ಹಿಂದುಳಿದ ವಿಶ್ವವಿದ್ಯಾಲಯ ಆಗಿದೆ : ಮಲ್ಲಿಕಾರ್ಜುನ್​ ಖರ್ಗೆ

Spread the loveಕಲಬುರಗಿ : ಜಿಲ್ಲೆಯಲ್ಲಿ ಜಯದೇವ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಲಬುರಗಿ ಬೆಂಗಳೂರಿನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ