Breaking News
Home / ಜಿಲ್ಲೆ / ಯಕ್ಸಂಬಾ ಬೀರೇಶ್ವರ ಮಂದಿರದ ಆವರಣದಲ್ಲಿ, ನಿಪ್ಪಾಣಿ ಶಿಶು ಅಭಿವೃದ್ಧಿ ಯೋಜನೆ,

ಯಕ್ಸಂಬಾ ಬೀರೇಶ್ವರ ಮಂದಿರದ ಆವರಣದಲ್ಲಿ, ನಿಪ್ಪಾಣಿ ಶಿಶು ಅಭಿವೃದ್ಧಿ ಯೋಜನೆ,

Spread the love

 

ಯಕ್ಸಂಬಾ ಬೀರೇಶ್ವರ ಮಂದಿರದ ಆವರಣದಲ್ಲಿ, ನಿಪ್ಪಾಣಿ ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಪ್ರಧಾನಿ ಶ್ರೀ ನರೇಂದ್ರ ಮೋದಿ ಜಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ರಾಷ್ಟ್ರೀಯ ಪೋಷಣ ಅಭಿಯಾನ ಕಾರ್ಯಕ್ರಮದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ ಯವರು ಭಾಗವಹಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

 

ತಾಯಿ ಎರಡು ಪಟ್ಟು ಆಹಾರ ಸೇವಿಸಿದರೆ ಹೊಟ್ಟೆಯಲ್ಲಿರುವ ಮಗುವಿಗೂ ಅದರ ಸ್ವಲ್ಪ ಅಂಶ ದೊರೆಯುತ್ತದೆ. ತರಕಾರಿ ಸೊಪ್ಪು, ಹಣ್ಣು, ಮೊಳಕೆ ಕಾಳುಗಳನ್ನು ತಿನ್ನಬೇಕು. ಇದರಿಂದ ಪೌಷ್ಟಿಕ ಆಹಾರ ದೇಹಕ್ಕೆ ದೊರೆಯುತ್ತದೆ. ಮಗು ಆರೋಗ್ಯಯುತವಾಗಿ ಬೆಳೆಯುತ್ತದೆ’

‘ಪೌಷ್ಟಿಕಾಂಶದ ಕೊರತೆಯಿಂದ ಮಗು ಜನಿಸುವ ಸಮಯದಲ್ಲಿ ಅನೇಕ ಸಮಸ್ಯೆಗಳು ಎದುರಾಗುತ್ತವೆ. ಇದನ್ನು ಹೋಗಲಾಡಿಸುವ ಉದ್ದೇಶದಿಂದ ಸರ್ಕಾರ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು.

ಅಂಗನವಾಡಿ ಕೇಂದ್ರಗಳ ಮಕ್ಕಳ ದಾಖಲಾತಿ, ಹಾಜರಾತಿ, ವಿವರಗಳನ್ನು ಸುಲಲಿತವಾಗಿ ದಾಖಲಿಸಲು ಮುಂದಿನ ದಿನಗಳಲ್ಲಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ ಮೊಬೈಲ್ ವಿತರಿಸಲಾಗುವುದುದೆಂದರು.

ಶಿವಮೊಗ್ಗದ ಸಮನ್ವಯ ಟ್ರಸ್ಟ್ ಕಲಾತಂಡದಿಂದ, ಪೋಷಣ ಅಭಿಯಾನ ಬಾಲ್ಯ ವಿವಾಹ, ಬೇಟಿ ಬಚಾವೋ ಬೇಟಿ ಪಡಾವೋ ಹಾಗು ಮಾತೃವಂದನಾ ಯೋಜನೆ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಬೀದಿನಾಟಕ ಪ್ರದರ್ಶನ ನಡೆಯಿತು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೆಳಗಾವಿ ಉಪನಿರ್ದೇಶಕರಾದ ಬಸವರಾಜ ವರವಟ್ಟೆ, ನಿಪ್ಪಾಣಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೌ. ಸಾವಿತ್ರಿ ಗುಗ್ಗರಿ, ಕಲ್ಲಪ್ಪ ಜಾದವ, ಆಶಾಜ್ಯೋತಿ ವಿಶೇಷ ಮಕ್ಕಳ ಶಾಲೆ ಅಧ್ಯಕ್ಷರಾದ ಜ್ಯೋತಿಪ್ರಸಾದ ಜೊಲ್ಲೆ, ಮಂಜುಶ್ರೀ ಕಟ್ಟಿಕರ, ಪಟ್ಟಣ ಪಂಚಾಯತಿ ಸದಸ್ಯರು, ರಾಜಶ್ರೀ ಬಡಾಳೆ, ಬೀದಿನಾಟಕ ಮುಖ್ಯಸ್ಥರಾದ ಶಿವಮೊಗ್ಗದ ಮಂಜುಳಾ ಹಿರೇಮಠ ಉಪಸ್ಥಿತರಿದ್ದರು, ಹಾಗೂ ಚಿಕ್ಕೋಡಿ ನಿಪ್ಪಾಣಿ ವಲಯದ ಎಲ್ಲಾ ಅಂಗನವಾಡಿ ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಗ್ರಾಮದ ಮಹಿಳೆಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ತುಳಿತಕ್ಕೆ ಒಳಗಾದವನ್ನು ಒಡೆಯುವ ಕೆಲಸ ಆಗಬಾರದು ಎಂದ ಬಿ.ಕೆ ಹರಿಪ್ರಸಾದ್

Spread the love ಬೆಳಗಾವಿ : ತುಳಿತಕ್ಕೆ ಒಳಗಾದವನ್ನು ಒಡೆಯುವ ಕೆಲಸ ಆಗಬಾರದು ಎಂದು ವಿಧಾನ ಪರಿಷತ್​ ಸದಸ್ಯ ಬಿ.ಕೆ ಹರಿಪ್ರಸಾದ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ