Breaking News
Home / ಜಿಲ್ಲೆ / ಬುಧವಾರ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಚಂದನ್, ನಿವೇದಿತಾ

ಬುಧವಾರ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಚಂದನ್, ನಿವೇದಿತಾ

Spread the love

ಮೈಸೂರು: ಗಾಯಕ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿವಾಹ ಬುಧವಾರ ಮೈಸೂರಿನಲ್ಲಿ ನಡೆಯಲಿದ್ದು, ಸಕಲ ಸಿದ್ಧತೆ ನಡೆಸಲಾಗುತ್ತಿದೆ.

ಮೈಸೂರಿನ ದಟ್ಟಗಹಳ್ಳಿಯ ನಿವೇದಿತಾ ಗೌಡ ಮನೆಯಲ್ಲಿ ಮದುವೆ ಕಾರ್ಯಗಳು ಜೋರಾಗಿ ನಡೆದಿದ್ದು, ಫೆ.25 ಮತ್ತು 26ರಂದು ಕನ್ವೆನ್ಶನ್ ಹಾಲ್‍ನಲ್ಲಿ ನಡೆಯಲಿರುವ ವಿವಾಹಕ್ಕೆ ಗಣ್ಯರ ದಂಡೇ ಹರಿದು ಬರುತ್ತಿದೆ. ಈ ಮದುವೆ ಸಮಾರಂಭಕ್ಕೆ ಸ್ಯಾಂಡಲ್‍ವುಡ್‍ನ ಕಲಾವಿದರು, ಗಾಯಕರು ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಸೇರಿ ಸುಮಾರು ಐದು ಸಾವಿರಕ್ಕೂ ಅಧಿಕ ಜನ ಸಾಕ್ಷಿ ಯಾಗುವ ನಿರೀಕ್ಷೆ ಇದೆ.

ಚಂದನ್ ಹಾಗೂ ನಿವೇದಿತಾ ಮದುವೆ ಆಮಂತ್ರಣ ನೀಡುವಲ್ಲಿ ಇಷ್ಟು ದಿನ ಬ್ಯುಸಿಯಾಗಿದ್ದರು. ಇತ್ತೀಚೆಗೆಷ್ಟೆ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ, ಚಾಲೆಂಜಿಂಗ್ ಸ್ಟಾರ್ ದರ್ಶನ್, ಪುನೀತ್ ರಾಜ್‍ಕುಮಾರ್ ಸೇರಿದಂತೆ ಹಲವು ಗಣ್ಯರಿಗೆ ಲಗ್ನ ಪತ್ರಿಕೆ ನೀಡಿದ್ದರು. ದರ್ಶನ್ ಅವರನ್ನು ಭೇಟಿಯಾಗಿದ್ದ ಸಂತಸವನ್ನು ಚಂದನ್ ಮತ್ತು ನಿವೇದಿತಾ ಇನ್‍ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದರು. ಹೀಗೆ ಸಿನಿಮಾರಂಗದವರಿಗೆ ಮದುವೆಯ ಆಮಂತ್ರಣ ಪತ್ರಿಕೆಯನ್ನು ನೀಡಿದ್ದಾರೆ.

ಯುವ ದಸರಾದ ಸರ್ಕಾರಿ ವೇದಿಕೆಯಲ್ಲಿ ಚಂದನ್ ಶೆಟ್ಟಿ ಅಭಿಮಾನಿಗಳ ಮುಂದೆ ಗೆಳತಿ ನಿವೇದಿತಾರಿಗೆ ಪ್ರಪೋಸ್ ಮಾಡಿದ್ದರು. ವೇದಿಕೆಯಲ್ಲಿಯೇ ರಿಂಗ್ ತೊಡಿಸಿ ತಮ್ಮ ಪ್ರೇಮ ವಿಚಾರವನ್ನು ಚಂದನ್ ಅಧಿಕೃತವಾಗಿ ಹೇಳಿಕೊಂಡಿದ್ದರು. ಬಳಿಕ ಅಕ್ಟೋಬರ್ 21ರಂದು ಚಂದನ್ ಶೆಟ್ಟಿ ತಮ್ಮ ಆತ್ಮೀಯ ಗೆಳತಿ ಬಾರ್ಬಿ ಗರ್ಲ್ ನಿವೇದಿತಾ ಗೌಡ ಜೊತೆ ಮೈಸೂರಿನ ಖಾಸಗಿ ಹೋಟೆಲಿನಲ್ಲಿ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಮಳೆ ಅಬ್ಬರಕ್ಕೆ ಮನೆ ಕುಸಿತ; ಮಹಿಳೆಗೆ ಗಂಭೀರ ಗಾಯ, ನಾಲ್ಕು ವಾಹನಗಳು ಜಖಂ

Spread the loveಬೆಳಗಾವಿ: ಜಿಲ್ಲೆಯಾದ್ಯಂತ ಸುರಿಯುತ್ತಿವ ಭಾರಿ ಮಳೆಯಿಂದಾಗಿ ಮನೆಯೊಂದು ಸಂಪೂರ್ಣವಾಗಿ ನೆಲಸಮವಾಗಿರುವ ಘಟನೆ ತಾಲೂಕಿನ ವಡಗಾಂವಿ ಪ್ರದೇಶದಲ್ಲಿ ನಡೆದಿದೆ. ವಡಗಾವಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ