Breaking News

ಸಚಿವೆ ಕಮಲ ರಾಣಿ ವರುಣ್ ನಿಧನ: ಸಿಎಂ ಯೋಗಿ ಆದಿತ್ಯನಾಥ್ ಅಯೋಧ್ಯೆ ಭೇಟಿ ರದ್ದು

Spread the love

ಲಖನೌ: ಸಚಿವೆ ಕಮಲ ರಾಣಿ ವರುಣ್ ನಿಧನ ಹೊಂದಿರುವ ಹಿನ್ನೆಲೆಯಲ್ಲಿ ಭಾನುವಾರ ಅಯೋಧ್ಯೆಗೆ ಭೇಟಿ ನೀಡಬೇಕಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ಕಾರ್ಯಕ್ರಮವನ್ನು ರದ್ದುಪಡಿಸಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲನೆ ನಡೆಸುವ ಸಲುವಾಗಿ ಇಂದು ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಗೆ ನೀಡಿಲಿದ್ದರು. ಆದರೆ, ಕೊರೋನಾದಿಂದಾಗಿ ಕಮಲ ರಾಣಿ ವರಣ್ ಅವರು ನಿಧನರಾಗಿರುವ ಹಿನ್ನೆಲೆಯಲ್ಲಿ ಭೇಟಿ ರದ್ದುಪಡಿಸಿದ್ದಾರೆಂದು ವರದಿಗಳು ತಿಳಿಸಿವೆ.

ಈ ನಡುವೆ ಕಮಲ ರಾಣಿಯವರು ನಿಧನ ಹೊಂದಿರುವ ಹಿನ್ನೆಲೆಯಲ್ಲಿ ಯೋಗಿ ಆದಿತ್ಯಾನಾಥ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಕಮಲ ರಾಣಿ ವರುಣ್ ಅವರ ನಿಧನಕ್ಕೆ ಸಂತಾಪ ಸೂಚಿಸುತ್ತೇನೆ.  ಕಮಲ ರಾಣಿಯವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬ ವರ್ಗಕ್ಕೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಕಮಲ ಅವರಲ್ಲಿ ಕೊರೋನಾ ಪತ್ತೆಯಾಗಿತ್ತು. ಬಳಿಕ ಅವರು ಎಸ್’ಜಿಪಿಜಿಐ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸಾರ್ವಜನಿಕ ನಾಯಕರು ಹಾಗೂ ಸಾಮಾಜಿಕ ಕಾರ್ಯಕರ್ತರಾಗಿದ್ದ ಅವರು ಸಾಕಷ್ಟು ಹೆಸರು ಗಳಿಸಿದ್ದರು. ಸಂಪುಟದಲ್ಲಿದ್ದಷ್ಟು ಸಂದರ್ಭದಲ್ಲಿಯೂ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದರು ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಗುಲ್ಬರ್ಗಾ ವಿವಿ ಅತಿ ಹಿಂದುಳಿದ ವಿಶ್ವವಿದ್ಯಾಲಯ ಆಗಿದೆ : ಮಲ್ಲಿಕಾರ್ಜುನ್​ ಖರ್ಗೆ

Spread the loveಕಲಬುರಗಿ : ಜಿಲ್ಲೆಯಲ್ಲಿ ಜಯದೇವ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಲಬುರಗಿ ಬೆಂಗಳೂರಿನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ