Breaking News
Home / new delhi / ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 76,472 ಹೊಸ ಕೇಸು, 34 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 76,472 ಹೊಸ ಕೇಸು, 34 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

Spread the love

ನವದೆಹಲಿ: ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 76 ಸಾವಿರದ 472 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 34 ಲಕ್ಷ ಗಡಿ ದಾಟಿದೆ.

ನಿನ್ನೆ ಒಂದೇ ದಿನ 76,472 ಹೊಸ ಕೇಸ್ ಜೊತೆಗೆ ಪ್ರಸ್ತುತ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 34,63,973ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ ಸೋಂಕಿಗೆ ಸಾವಿರದ 021 ಮಂದಿ ಮಹಾಮಾರಿ ವೈರಸ್ ಗೆ ಬಲಿಯಾಗಿದ್ದು, ಇದುವರೆಗೆ ದೇಶದಲ್ಲಿ ಕೊರೋನಾಗೆ ಮೃತಪಟ್ಟವರ ಸಂಖ್ಯೆ 62,550ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಈ ನಡುವೆ 34,63,973 ಮಂದಿ ಸೋಂಕಿತರ ಪೈಕಿ 26,48,999 ಮಂದಿ ಗುಣಮುಖರಾಗಿದ್ದು, ದೇಶದಲ್ಲಿ ಇನ್ನೂ 7,52,424 ಸಕ್ರಿಯ ಕೇಸುಗಳಿವೆ ಎಂದು ಸಚಿವಾಲಯದ ಮಾಹಿತಿ ತಿಳಿಸಿದೆ.


Spread the love

About Laxminews 24x7

Check Also

ಭ್ರೂಣ ಹತ್ಯೆ ತಡೆಯುವಲ್ಲಿ ಕರ್ತವ್ಯ ಲೋಪ; ಇಬ್ಬರು ಅಧಿಕಾರಿಗಳ ಅಮಾನತು

Spread the love ನಗರದ ಮಾತಾ ಆಸ್ಪತ್ರೆಯಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ (Female foeticide) ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ