Breaking News

ಸಾವಿರಾರು ಎಕರೆ ರೈತರ ಫಲವತ್ತಾದ ಭೂಮಿ ಸರ್ಕಾರದ ಸ್ವಾಧೀನಕ್ಕೆ’

Spread the love

ನಾಗಮಂಗಲ  : ಸ್ಥಳೀಯ ನಿರುದ್ಯೋಗಿಗಳಿಗೆ ಉದ್ಯೋಗ ಸಿಗಲಿ ಎಂಬ ಕಾರಣಕ್ಕೆ ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಈ ಪ್ರದೇಶದ ಬರಡು ಭೂಮಿಯಲ್ಲಿ ಕೈಗಾರಿಕಾ ಯೋಜನೆ ರೂಪಿಸಿದ್ದೆ. ಆದರೀಗ ಕೃಷಿಗೆ ಯೋಗ್ಯವಾದ ಫಲವತ್ತಾದ ಭೂಮಿಯನ್ನು ವಶಪಡಿಸಿಕೊಳ್ಳಲು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಏನೇ ಆದರೂ ರೈತರಿಗೆ ಅನ್ಯಾಯವಾಗಲು ನಾನು ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ತಾಲೂಕಿನ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೈಗಾರಿಕಾ ಪ್ರದೇಶಾಭಿವೃದ್ಧಿಗಾಗಿ ರೈತರ ಕೃಷಿಗೆ ಯೋಗ್ಯವಾದ 1227 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ಕೈಬಿಡುವಂತೆ ಆಗ್ರಹಿಸಿ ಹಮ್ಮಿಕೊಂಡಿದ್ದ ಬೃಹತ್‌ ಪ್ರತಿಭಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿಯಾಗಿದ್ದ ವೇಳೆ ಕೊಪ್ಪಳ, ಕೋಲಾರ, ಮೈಸೂರು, ಹಾಸನ, ತುಮಕೂರು, ಚಿತ್ರದುರ್ಗ ಸೇರಿದಂತೆ ರಾಜ್ಯದ 9 ಕಡೆಗಳಲ್ಲಿ ವಿವಿಧ ಬಗೆಯ ಕೈಗಾರಿಕೆಗಳನ್ನು ಆರಂಭಿಸಲು ಯೋಜನೆ ರೂಪಿಸಿದ್ದೆ.

ಕೇಂದ್ರ ಸರ್ಕಾ​ರದ ಭಾಷಾ ನೀತಿಗೆ ಕುಮಾರಸ್ವಾಮಿ ಆಕ್ರೋ​ಶ .

ತಾಲೂಕಿನ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕನಿಷ್ಠ 200 ರಿಂದ 300 ಎಕರೆ ಪ್ರದೇಶದ ಬರಡು ಭೂಮಿಯಲ್ಲಿ ಕೈಗಾರಿಕಾ ಘಟಕ ಸ್ಥಾಪಿಸುವ ಯೋಜನೆ ರೂಪಿಸಿದ್ದೆ. ಆದರೆ, ಕೃಷಿಗೆ ಯೋಗ್ಯವಾದ ರೈತರ 1227 ಎಕರೆ ಫಲವತ್ತಾದ ಭೂಮಿ ಭೂಸ್ವಾಧೀನವಾಗುತ್ತಿರುವ ಬಗ್ಗೆ ನನಗೆ ಗೊತ್ತಿಲ್ಲ. ಈ ಯೋಜನೆಯಿಂದಾಗಿ ಸ್ಥಳೀಯ ಜನರಲ್ಲಿ ಆತಂಕ ಶುರುವಾಗಿದೆ. ರೈತರ ಹಿತಕಾಯುವ ಸಲುವಾಗಿ ಮುಂದೆ ಏನು ಮಾಡಬೇಕೋ ಅದನ್ನು ಮಾಡುತ್ತೇನೆ ಎಂದರು.


Spread the love

About Laxminews 24x7

Check Also

ಕರ್ತವ್ಯದ ತುರ್ತುಕರೆ: ಲಚ್ಯಾಣದಲ್ಲಿ ಯೋಧನಿಗೆ ಸಂಭ್ರಮದ ಬಿಳ್ಕೊಡುಗೆ

Spread the love ಕರ್ತವ್ಯದ ತುರ್ತುಕರೆ: ಲಚ್ಯಾಣದಲ್ಲಿ ಯೋಧನಿಗೆ ಸಂಭ್ರಮದ ಬಿಳ್ಕೊಡುಗೆ ಪೆಹಲ್ಗಾಮ್‌ದಲ್ಲಿ ಅಮಾಯಕರ ಮೇಲೆ ಉಗ್ರರು ನಡೆಸಿದ ದಾಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ