ನೆಲಮಂಗಲ: ಬಣ್ಣ ಬಳಿಯಲು ಹೋಗಿ ಸುಮಾರು 12 ಅಡಿ ಆಳದ ನೀರಿನ ಸಂಪ್‍ಗೆ ಬಿದ್ದು ಉಸಿರಾಟದ ತೊಂದರೆಯಿಂದ ನರಳಾಡುತ್ತಿದ್ದ ಪೇಂಟರ್ ಹಾಗೂ ಆತನ ರಕ್ಷಣೆಗೆ ಇಳಿದಿದ್ದವರನ್ನು ಅಗ್ನಿಶಾಮಕ ಸಿಬ್ಬಂದಿ ರೇವಣ್ಣ ಪ್ರಾಣದ ಹಂಗು ತೊರೆದು ರಕ್ಷಿಸಿ ಹೀರೋ ಆಗಿದ್ದಾರೆ.
ಬೆಂಗಳೂರು ಹೊರವಲಯದ ನೆಲಮಂಗಲ ನಗರದ ಸುಭಾಷ್ ನಗರದಲ್ಲಿ ಘಟನೆ ನಡೆದಿದ್ದು, ಉಸಿರಾಟದ ತೊಂದರೆಯಿಂದ ನರಳಾಡುತ್ತಿದ್ದ ಪೇಂಟರ್ ಹಾಗೂ ಆತನ ರಕ್ಷಣೆಗೆ ಇಳಿದಿದ್ದ ವ್ಯಕ್ತಿ ಒಟ್ಟು ಇಬ್ಬರನ್ನು ಅಗ್ನಿಶಾಮಕ ಸಿಬ್ಬಂದಿ ರೇವಣ್ಣ ರಕ್ಷಿಸಿದ್ದಾರೆ.
ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಒಟ್ಟು ಒಬ್ಬರು ಪೇಂಟರ್ಸ್ ಸಂಪ್‍ಗೆ ಇಳಿದಿದ್ದರು. ಒಬ್ಬರು ಹೇಗೋ ಮೇಲಕ್ಕೆ ಬಂದಿದ್ದಾರೆ. ಆದರೆ ಓರ್ವ ಸಂಪ್‍ನಲ್ಲಿಯೇ ಸಿಕ್ಕಿಹಾಕಿಕೊಂಡಿದ್ದಾರೆ. ಉಸಿರಾಟದ ತೊಂದರೆಯಿಂದ ಪೇಂಟರ್ ಅಸ್ವಸ್ಥರಾಗಿದ್ದಾರೆ. ಪೇಂಟರ್ ರಕ್ಷಣೆ ಮಾಡಲು ಇಬ್ಬರು ಸಂಪ್‍ಗೆ ಇಳಿದಿದ್ದರೂ ಸಾಧ್ಯವಾಗಲಿಲ್ಲ. ಈ ಸಂದರ್ಭದಲ್ಲಿ ಸಹ ರಕ್ಷಣೆಗಾಗಿ ಇಳಿದಿದ್ದ ಇಬ್ಬರ ಪೈಕಿ ಒಬ್ಬರು ಸಂಪ್ ನಲ್ಲಿ ಸಿಲುಕಿದ್ದರು. ಮತ್ತೊಬ್ಬರು ಮೇಲಕ್ಕೆ ಬಂದಿದ್ದರು.
ವಿಷಯ ತಿಳಿದ ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿ ನೀರಿನ, ಸಂಪ್‍ಗೆ ಹಿಳಿದು ಇಬ್ಬರನ್ನೂ ರಕ್ಷಿಸಿದ್ದಾರೆ. ಪ್ರಾಣದ ಹಂಗು ತೊರೆದು ಕಿರಿದಾದ ನೀರಿನ ಸಂಪ್‍ಗೆ ಇಳಿದು ಇಬ್ಬರನ್ನೂ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ ರೇವಣ್ಣ ಹೀರೋ ಹಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ರೇವಣ್ಣ, ಆಕ್ಸಿಜನ್ ಅಳವಡಿಸಿಕೊಂಡು ಧೈರ್ಯದಿಂದ ನೀರಿನ ಸಂಪ್‍ಗೆ ಇಳಿದು ಇಬ್ಬರನ್ನೂ ರಕ್ಷಣೆ ಮಾಡಿದ್ದಾರೆ.