Breaking News

ಬೇರೆ ನಟರ ಕಾರ್ಯಕ್ರಮದಲ್ಲಿ ಡಿ-ಬಾಸ್ ಘೋಷಣೆ ಬೇಡ: ಅಭಿಮಾನಿಗಳಿಗೆ ಡಿ ಕಂಪನಿ ಖಡಕ್ ಸಂದೇಶ

Spread the love

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ‘ಡಿ-ಬಾಸ್’ ಹೆಸರಿನಲ್ಲಿ ನಡೆಯುತ್ತಿರುವ ಅಭಿಮಾನಿಗಳ ಅತಿರೇಕದ ವರ್ತನೆಗೆ ಕಡಿವಾಣ ಹಾಕಲು ನಟ ದರ್ಶನ್ ಅವರ ಅಧಿಕೃತ ಬಳಗ ಮುಂದಾಗಿದೆ. ಬೇರೆ ನಟರ ಕಾರ್ಯಕ್ರಮಗಳು ಹಾಗೂ ಗಣ್ಯರ ವೇದಿಕೆಗಳಲ್ಲಿ ಅನಗತ್ಯವಾಗಿ ದರ್ಶನ್ ಹೆಸರು ಕೂಗಿ ಮುಜುಗರ ಸೃಷ್ಟಿಸಬಾರದು ಎಂದು ಡಿ ಕಂಪನಿ ಅಭಿಮಾನಿಗಳಿಗೆ ಸ್ಪಷ್ಟ ಸಂದೇಶ ನೀಡಿದೆ.

ಇತ್ತೀಚೆಗೆ ಮಂಡ್ಯದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ನಟ ಧ್ರುವ ಸರ್ಜಾ ಮತ್ತು ಶಾಸಕ ರವಿ ಗಣಿಗ ವೇದಿಕೆಯಲ್ಲಿದ್ದಾಗ ಕೆಲವರು ‘ಡಿ-ಬಾಸ್’ ಎಂದು ಕೂಗಿ ಗದ್ದಲ ಎಬ್ಬಿಸಿದ್ದರು. ಇದರಿಂದ ಸಿಟ್ಟಾದ ಶಾಸಕ ರವಿ ಗಣಿಗ, ಅಭಿಮಾನಿಗಳ ಅತಿರೇಕದ ವರ್ತನೆಯೇ ದರ್ಶನ್ ಇಂದಿನ ಪರಿಸ್ಥಿತಿಗೆ ಕಾರಣ ಎಂದು ಹೇಳಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಇದು ಮೊದಲ ಘಟನೆಯಲ್ಲ. ಈ ಹಿಂದೆ ರಾಮನಗರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಿದ್ದ ಕಾರ್ಯಕ್ರಮದಲ್ಲೂ ಕೆಲವರು ದರ್ಶನ್ ಹೆಸರಿನಲ್ಲಿ ಘೋಷಣೆ ಕೂಗಿದ್ದರು. ಆಗ ಡಿಕೆಶಿ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು.

ಇನ್ನು, ಮದುವೆ ಸಮಾರಂಭವೊಂದರಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರನ್ನು ಕಂಡಾಗಲೂ ಅಭಿಮಾನಿಗಳು ಇದೇ ರೀತಿ ಘೋಷಣೆ ಕೂಗಿದ್ದರು. ಆಗ ವಿಜಯಲಕ್ಷ್ಮಿ ಕೂಡ ಇಂತಹ ವರ್ತನೆಯಿಂದ ದರ್ಶನ್‌ಗೆ ತೊಂದರೆಯಾಗುತ್ತಿದೆ. ದಯವಿಟ್ಟು ಹೀಗೆ ಮಾಡಬೇಡಿ ಎಂದು ಮನವಿ ಮಾಡಿದ್ದರು.

ಇದೀಗ ಮಂಡ್ಯದ ಘಟನೆಯ ಬೆನ್ನಲ್ಲೇ ಡಿ ಕಂಪನಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಅಭಿಮಾನಿಗಳಿಗೆ ಸಂದೇಶ ಹಂಚಿಕೊಂಡಿದೆ. ಬೇರೆ ನಟರ ವೇದಿಕೆ, ಸಿನಿಮಾ ಕಾರ್ಯಕ್ರಮಗಳು ಮತ್ತು ಸಾರ್ವಜನಿಕ ಸಭೆಗಳಲ್ಲಿ ದರ್ಶನ್ ಹೆಸರನ್ನು ಅನಗತ್ಯವಾಗಿ ಕೂಗಬಾರದು. ಅಭಿಮಾನವನ್ನು ತಾಳ್ಮೆಯಿಂದ ವ್ಯಕ್ತಪಡಿಸಬೇಕು. ದರ್ಶನ್ ಅವರ ಪ್ರಸ್ತುತ ಕಾನೂನು ಪರಿಸ್ಥಿತಿಯನ್ನು ಗಂಭೀರವಾಗಿ ಅರ್ಥಮಾಡಿಕೊಳ್ಳಬೇಕು ಎಂದು ಮನವಿ ಮಾಡಿದೆ.

ಹೀಗಾಗಿ ಡಿ ಕಂಪನಿಯ ಈ ಸಂದೇಶದ ಬಳಿಕವಾದರೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ನಡೆಯುತ್ತಿರುವ ಅನಗತ್ಯ ಘೋಷಣೆಗಳಿಗೆ ಕಡಿವಾಣ ಬೀಳುತ್ತದೆಯೇ ಎಂಬುದನ್ನು ಕಾದುನೋಡಬೇಕಿದೆ.


Spread the love

About Laxminews 24x7

Check Also

ಡಿಸೆಂಬರ್ ಅಂತ್ಯಕ್ಕೆ ವಿಜಯಪುರದಲ್ಲಿ ವಿಮಾನ ಹಾರಾಟ – ಎಂ.ಬಿ ಪಾಟೀಲ್

Spread the loveವಿಜಯಪುರ: ಇದೇ ಡಿಸೆಂಬರ್ ಅಂತ್ಯದೊಳಗೆ ವಿಜಯಪುರದಲ್ಲಿ ವಿಮಾನ ಹಾರಾಟ ಪ್ರಾರಂಭಗೊಳ್ಳಲಿದೆ ಎಂದು ಸಚಿವ ಎಂ.ಬಿ ಪಾಟೀಲ್ ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ