Breaking News

ತನಿಖೆ ಮುಗಿದು ಕೆಪಿಎಸ್‌ಸಿ ಸುಧಾರಣೆ ಆಗೋವರೆಗೂ KAS ಪರೀಕ್ಷೆ ಬೇಡ: ಹೆಚ್‌ಡಿಕೆ ಆಗ್ರಹ

Spread the love

ಬೆಂಗಳೂರು: ಕೆಪಿಎಸ್‌ಸಿ ಪರೀಕ್ಷೆ  ಅಕ್ರಮದ ಆರೋಪಗಳ ಹಿನ್ನೆಲೆಯಲ್ಲಿ ಪರೀಕ್ಷಾ ವ್ಯವಸ್ಥೆಯ ಮೇಲೆ ಅಭ್ಯರ್ಥಿಗಳಿಗೆ ನಂಬಿಕೆ ಇಲ್ಲದಂತಾಗಿದೆ. ಹೀಗಾಗಿ ಅಕ್ರಮದ ತನಿಖೆ ಪೂರ್ಣಗೊಂಡು, ಕೆಪಿಎಸ್‌ಸಿ ವ್ಯವಸ್ಥೆಯಲ್ಲಿ ಸುಧಾರಣೆ ಆಗುವವರೆಗೆ ನವೆಂಬರ್ 15ರಂದು ನಡೆಯಲಿರುವ ಕೆಎಎಸ್ ಪರೀಕ್ಷೆಯನ್ನು ಮುಂದೂಡಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಜೆಡಿಎಸ್ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ಕೆಪಿಎಸ್‌ಸಿ ಅಕ್ರಮದ ವಿಚಾರವಾಗಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಈಗಾಗಲೇ ಕೆಪಿಎಸ್‌ಸಿಯಲ್ಲಿ ಅಕ್ರಮ ನಡೆದಿರುವುದು ಸಾಬೀತಾಗಿದೆ. ಇಡಿ, ಎಸ್‌ಐಟಿ ಸೇರಿದಂತೆ ವಿವಿಧ ತನಿಖಾ ಸಂಸ್ಥೆಗಳು ಕಳೆದ ಮೂರು-ನಾಲ್ಕು ವರ್ಷಗಳ ಅಕ್ರಮಗಳ ಬಗ್ಗೆ ತನಿಖೆ ನಡೆಸುತ್ತಿವೆ. ಇಂತಹ ಸಂದರ್ಭದಲ್ಲಿ ಮತ್ತೊಂದು ಪರೀಕ್ಷೆ ನಡೆಸುವುದು ಸರಿಯಲ್ಲ ಎಂದು ಹೇಳಿದರು.

ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಕೆಪಿಎಸ್‌ಸಿ ಸಂಸ್ಥೆಯ ಮೇಲೆಯೇ ನಂಬಿಕೆ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಬೇಕು ಎಂದು ಆಗ್ರಹಿಸಿ ಅಭ್ಯರ್ಥಿಗಳು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಮೊದಲು ಗೊಂದಲಗಳನ್ನು ಸರಿಪಡಿಸಿ, ಕೆಪಿಎಸ್‌ಸಿ ವ್ಯವಸ್ಥೆ ಪ್ರಾಮಾಣಿಕವಾಗಿದೆ ಎಂಬ ವಿಶ್ವಾಸ ಮೂಡಿಸಬೇಕು. ಅಲ್ಲಿಯವರೆಗೆ ಪರೀಕ್ಷೆ ನಡೆಸಬಾರದು ಎಂದು ಒತ್ತಾಯಿಸಿದರು.


Spread the love

About Laxminews 24x7

Check Also

ಮಹಾರಾಜರು ಅರಮನೆ ಕಟ್ಟಿಸಿದ್ದು ಜನರ ತೆರಿಗೆಯ ಹಣದಿಂದಲೇ, ಎಲ್ಲವೂ ಜನರಿಗೇ ಸೇರಬೇಕು: ಯತೀಂದ್ರ ಸಿದ್ದರಾಮಯ್ಯ

Spread the loveಮೈಸೂರು: ಮಹಾರಾಜರು ಅರಮನೆ ಕಟ್ಟಿಸಿದ್ದು ಕೂಡ ಜನರ ತೆರಿಗೆಯ ಹಣದಿಂದಲೇ, ಹೀಗಾಗಿ ಎಲ್ಲವೂ ಜನರಿಗೇ ಸೇರಬೇಕು ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ