Breaking News

ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ – ಕೇಂದ್ರ ಸರ್ಕಾರದ ಮೂಲಗಳ ಮಾಹಿತಿ

Spread the love

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌  ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸರ್ಕಾರದ ಮೂಲಗಳು ಸ್ಪಷ್ಟಪಡಿಸಿವೆ ಎಂದು ವರದಿಯಾಗಿದೆ.

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕಾಕ್ರೋಚ್‌ ಜನತಾ ಪಾರ್ಟಿ ನಿಯೋಗವನ್ನ ಭೇಟಿ ಮಾಡಿದ ಕೇಂದ್ರ ಸರ್ಕಾರ ಶನಿವಾರ ಮಧ್ಯಾಹ್ನ ನಿರ್ಧಾರ ತಿಳಿಸುವುದಾಗಿ ಹೇಳಿದೆ. ಇದರ ಮಧ್ಯೆ ಸರ್ಕಾರಿ ಮೂಲಗಳಿಂದಲೇ ಮಹತ್ವದ ಮಾಹಿತಿ ಹೊರಬಿದ್ದಿದೆ.

ರಾಜೀನಾಮೆ ನೀಡುವುದು ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ಸುಲಭ ಮಾರ್ಗವಾಗಿದೆ. ಜನರು ನೀಡಿದ ಜನಾದೇಶವನ್ನ ಸರ್ಕಾರ ಪೂರ್ಣಗೊಳಿಸುತ್ತದೆ, ಆದ್ರೆ ಪ್ರಧಾನ್‌ ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿರುವುದಾಗಿ ತಿಳಿದುಬಂದಿದೆ.

ಉನ್ನತ ಮೂಲಗಳು ಹೇಳುವಂತೆ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯಲ್ಲಿರುವ ಲೋಪಗಳನ್ನ ಗುರುತಿಸಿ ಅವುಗಳನ್ನು ಸರಿಪಡಿಸುವ ಕಾರ್ಯಕ್ಕೆ ಆದ್ಯತೆ ನೀಡಲಾಗಿದೆ. ಪರೀಕ್ಷಾ ವ್ಯವಸ್ಥೆಯಲ್ಲಿನ ದೋಷಗಳ ಸಮಗ್ರ ಪಟ್ಟಿ ಸಿದ್ಧವಾಗಿದ್ದು, ಶೀಘ್ರದಲ್ಲೇ ಸುಧಾರಣಾ ಕ್ರಮಗಳನ್ನು ಜಾರಿಗೆ ತರಲಾಗುವುದು ಎಂದು ಮೂಲಗಳು ತಿಳಿಸಿವೆ. ಪ್ರಶ್ನೆಪತ್ರಿಕೆ ಸೋರಿಕೆ ಜಾಲಗಳ ವಿರುದ್ಧವೂ ಕಠಿಣ ಕ್ರಮ ಮುಂದುವರಿದಿದ್ದು, ಹಲವು ಗ್ಯಾಂಗ್‌ಗಳನ್ನ ಈಗಾಗಲೇ ಬಂಧಿಸಲಾಗಿದೆ ಎಂದು ಹೇಳಲಾಗಿದೆ.

ಮತ್ತೊಂದು ಕಡೆ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ ಪಾರ್ಟಿ (CJP) ಧರ್ಮೇಂದ್ರ ಪ್ರಧಾನ್ ರಾಜೀನಾಮೆಯೇ ತಮ್ಮ ಪ್ರಮುಖ ಬೇಡಿಕೆ ಎಂದು ಪುನರುಚ್ಚರಿಸಿದೆ. ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಮುಂದುವರಿಯಲಿದ್ದು, ಸರ್ಕಾರ ಬೇಡಿಕೆಗಳನ್ನ ಒಪ್ಪದಿದ್ದರೆ ದೇಶವ್ಯಾಪಿ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ನೀಡಿದೆ.

ಇದಕ್ಕೂ ಮುನ್ನ ಶುಕ್ರವಾರ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಹಾಗೂ ಜಿತೇಂದ್ರ ಸಿಂಗ್ ಅವರೊಂದಿಗೆ ನಡೆದ ಸಭೆಯಲ್ಲಿ CJP ಪ್ರತಿನಿಧಿಗಳು ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ನೀಟ್ ಪರೀಕ್ಷೆ ರದ್ದಾದ ಬಳಿಕ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ 1 ಕೋಟಿ ರೂ. ಪರಿಹಾರ, ಪ್ರತಿಭಟನಾಕಾರರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟರು. ಸರ್ಕಾರವು ಎಲ್ಲ ಬೇಡಿಕೆಗಳನ್ನು ಪರಿಶೀಲಿಸಿ ನಾಳೆ (ಜು.25) ರಂದು ಪ್ರತಿಕ್ರಿಯೆ ನೀಡುವುದಾಗಿ ತಿಳಿಸಿದೆ.


Spread the love

About Laxminews 24x7

Check Also

ಸೋಪ್ ಆರ್ಡರ್ ಮಾಡಲು ಹೋಗಿ 2.97 ಲಕ್ಷ ಕಳೆದುಕೊಂಡ ವ್ಯಕ್ತಿ

Spread the loveಶಿವಮೊಗ್ಗ: ಸೋಪನ್ನು ಆನ್‌ಲೈನ್ ಮೂಲಕ ಆರ್ಡರ್ ಮಾಡಿದ್ದ ವ್ಯಕ್ತಿಯೊಬ್ಬ ಬರೋಬ್ಬರಿ 2.97 ಲಕ್ಷ ರೂ. ಕಳೆದುಕೊಂಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ