Breaking News

ಬೆಳಗಾವಿ ನಗರದಲ್ಲಿ ಈ ರಸ್ತೆಗಳ ಮೇಲೆ ಸಂಚರಿಸುವಂತಿಲ್ಲ: ಪೊಲೀಸರ ವಾರ್ನಿಂಗ್

Spread the love

ಬೆಳಗಾವಿ: ನಾಡಿನ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಕುಂದಾನಗರಿ ಬೆಳಗಾವಿ ಸಜ್ಜಾಗಿದ್ದು, ನವೆಂಬರ್ 1ರಂದು ನಡೆಯಲಿರುವ ಅದ್ಧೂರಿ ಮೆರವಣಿಗೆಯ ಹಿನ್ನೆಲೆಯಲ್ಲಿ ನಗರ ಪೊಲೀಸ್ ಇಲಾಖೆ ಸಂಚಾರ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಮಾಡಿದೆ.

ನವೆಂಬರ್ 1ರಂದು ಬೆಳಿಗ್ಗೆ 11 ಗಂಟೆಯಿಂದ ರಾಜ್ಯೋತ್ಸವದ ಮೆರವಣಿಗೆ ಮುಕ್ತಾಯವಾಗುವವರೆಗೆ ಎಲ್ಲಾ ಭಾರಿ ವಾಹನಗಳ ಬೆಳಗಾವಿ ನಗರ ಪ್ರವೇಶವನ್ನು ನಿಷೇಧಿಸಲಾಗಿದೆ. ಮೆರವಣಿಗೆಯ ಸಂದರ್ಭದಲ್ಲಿ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೊಂದರೆಯಾಗದಂತೆ ಸುಗಮ ಸಂಚಾರಕ್ಕಾಗಿ ಪರ್ಯಾಯ ಮಾರ್ಗಗಳನ್ನು ನಿಗದಿಪಡಿಸಲಾಗಿದೆ.

ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗಗಳು

ಚಿಕ್ಕೋಡಿ, ಸಂಕೇಶ್ವರ ಹಾಗೂ ಕೊಲ್ಲಾಪುರ ಕಡೆಯಿಂದ ಬರುವ ಭಾರಿ ವಾಹನಗಳು ಬೈಪಾಸ್ ರಸ್ತೆ ಮೂಲಕ ಸಂಚರಿಸಬೇಕು. ಹಿಂಡಲಗಾ ಫಾಟಕ್, ಹಿಂಡಲಗಾ ಗಣೇಶ ಮಂದಿರ, ಗಾಂಧಿ ಸರ್ಕಲ್, ಶಿವಾಜಿ ಚೌಕ್, ಕೇಂದ್ರಿಯ ವಿದ್ಯಾಲಯ ನಂ.2, ಶಕತ್ ಪಾರ್ಕ್ ಹಾಗೂ ಗ್ಲೋಬ್ ಥಿಯೇಟರ್ ಸರ್ಕಲ್ ಮಾರ್ಗವಾಗಿ ಖಾನಾಪುರ ರಸ್ತೆಗೆ ತೆರಳುವಂತೆ ಸೂಚಿಸಲಾಗಿದೆ.

ಕೇಂದ್ರ ಬಸ್ ನಿಲ್ದಾಣದಿಂದ ಖಾನಾಪುರ ರಸ್ತೆ ಹಾಗೂ ಬೂಟ್ ಕಡೆಯಿಂದ ಸಂಚರಿಸುವ ವಾಹನಗಳಿಗೆ ಜವಾಹರಲಾಲ್ ನೆಹರು ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿದೆ. ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚಿಸಲಾಗಿದೆ.

ಜಜಾಮಾತಾ ಸರ್ಕಲ್, ದೇಶಪಾಂಡೆ ಪೆಟ್ರೋಲ್ ಪಂಪ್ ಕಡೆಯಿಂದ ನಗರ ಪ್ರವೇಶಿಸುವ ಭಾರಿ ವಾಹನಗಳು ರವಿವಾರ ಪೇಟೆ, ಪಾಟೀಲ ಗಲ್ಲಿ, ಸ್ಟೇಷನ್ ರಸ್ತೆ, ಗೋಗಟೆ ಸರ್ಕಲ್ ಮಾರ್ಗವಾಗಿ ಖಾನಾಪುರ ರಸ್ತೆಗೆ ತೆರಳಬೇಕು.

ಖಾನಾಪುರ ಕಡೆಯಿಂದ ಕಾಂಗ್ರೆಸ್ ರಸ್ತೆ ಮಾರ್ಗವಾಗಿ ಬೆಳಗಾವಿ ನಗರಕ್ಕೆ ಬರುವ ವಾಹನಗಳು ಮಿಲಿಟರಿ ಮಹಾದೇವ ಮಂದಿರದ ಹತ್ತಿರ ಎಡತಿರುಗಿ, ಅನಗತ್ಯವಾಗಿ ನಗರ ಪ್ರವೇಶಿಸದೆ ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕು. ಗಡಿಭಾಗದ ಕ್ರಾಸ್‌ಗಳು ಹಾಗೂ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿಯಂತ್ರಣ ಜಾರಿಯಲ್ಲಿರಲಿದೆ.

ರಾಜ್ಯೋತ್ಸವ ಮೆರವಣಿಗೆಗೆ ಬರುವ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ

ಮೆರವಣಿಗೆಯಲ್ಲಿ ಭಾಗವಹಿಸಲು ಬರುವ ಸಾರ್ವಜನಿಕರ ವಾಹನಗಳ ನಿಲುಗಡೆಗೆ ಪೊಲೀಸ್ ಇಲಾಖೆ ವಿವಿಧ ಸ್ಥಳಗಳನ್ನು ಗುರುತಿಸಿದೆ.

ಸಿಬಿಟಿ ಮೈದಾನ ಹಾಗೂ ಕ್ಲಬ್ ರಸ್ತೆ, ಸ್ವಾಮಿ ವಿವೇಕಾನಂದ ಮೈದಾನ ಮತ್ತು ಪೊಲೀಸ್ ಹೆಡ್ ಕ್ವಾರ್ಟರ್ಸ್, ಮಹಿಳಾ ಪೊಲೀಸ್ ಠಾಣೆಯ ಹಿಂಭಾಗದ ಪೊಲೀಸ್ ಇಲಾಖೆಯ ಮೈದಾನ., ದೇಶಪಾಂಡೆ ಬಿಲ್ಡಿಂಗ್ ಹಿಂಭಾಗದ ಗಾಂಧಿ ಸರ್ಕಲ್ ಬಳಿಯ ಡೈರಿ ಫಾರ್ಮ್ ಸ್ಥಳಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಇದೆ.

ಕರ್ನಾಟಕ ರಾಜ್ಯೋತ್ಸವದ ಮೆರವಣಿಗೆಯ ಸಂದರ್ಭದಲ್ಲಿ ಸಾರ್ವಜನಿಕರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ವಾಹನ ಸವಾರರು ನಿಗದಿಪಡಿಸಿರುವ ಪರ್ಯಾಯ ಮಾರ್ಗಗಳನ್ನು ಬಳಸುವ ಮೂಲಕ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಸಂಚಾರ ಪೊಲೀಸ್ ಇಲಾಖೆ ಮನವಿ ಮಾಡಿದೆ.


Spread the love

About Laxminews 24x7

Check Also

Special: ಕನ್ನಡವೇ ನಮ್ಮ ಉಸಿರು, ಕರ್ನಾಟಕವೇ ನಮ್ಮ ಹೆಮ್ಮೆ

Spread the loveನವೆಂಬರ್ 1, ಪ್ರತಿಯೊಬ್ಬ ಕನ್ನಡಿಗನ ಪಾಲಿಗೆ ಅತ್ಯಂತ ಹೆಮ್ಮೆಯ, ಅಭಿಮಾನದ ಹಾಗೂ ಸಂಭ್ರಮದ ದಿನ. ಕನ್ನಡ ನಾಡಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ