Breaking News

ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯಲ್ಲ – ಶಾಮನೂರು ಆಪ್ತ ಸಾಧಿಕ್ ಪೈಲ್ವಾನ್ ಸವಾಲ್

Spread the love

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ  ಕಾಂಗ್ರೆಸ್‍ನಬಂಡಾಯ ಅಭ್ಯರ್ಥಿ ಶಾಮನೂರು ಆಪ್ತ ಸಾಧಿಕ್ ಪೈಲ್ವಾನ್  ಕಣಕ್ಕಿಳಿದಿದ್ದಾರೆ. ಅವರ ಸ್ಪರ್ಧೆ ಕಾಂಗ್ರೆಸ್‍ಗೆ ತಲೆನೋವಾಗಿ ಪರಿಣಮಿಸಿದೆ.

ತಮ್ಮ ಸ್ಪರ್ಧೆ ಬಗ್ಗೆ ವಿಡಿಯೋ ಒಂದನ್ನು ಅವರು ಹರಿಬಿಟ್ಟಿದ್ದು, ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯಲ್ಲ ಎಂದು ಕಾಂಗ್ರೆಸ್‍ಗೆ ಸವಾಲು ಎಸೆದಿದ್ದಾರೆ. ಅಹಿಂದ ಸಮುದಾಯದ ಬೆಂಬಲದಿಂದ ಈ ಬಾರಿ ಚುನಾವಣೆ ಕಣದಲ್ಲಿ ಇದ್ದೇನೆ. ಅಹಿಂದ ಸಮುದಾಯ ಬಿಟ್ಟು ನಾನಿಲ್ಲ. ಅವರ ಆಶೀರ್ವಾದ ನನ್ನ ಮೇಲೆ ಇದೆ ಎಂದಿದ್ದಾರೆ.

ಕಾಂಗ್ರೆಸ್ ಮುಖಂಡರು ನಮ್ಮ ಅಹಿಂದ ಸಮುದಾಯಕ್ಕೆ ಟಿಕೆಟ್ ನೀಡದೇ ಅನ್ಯಾಯ ಮಾಡಿದ್ದಾರೆ ಎಂದು ಇದೇ ವೇಳೆ ಆಕ್ರೋಶ ಹೊರಹಾಕಿದ್ದಾರೆ.

ಸಮರ್ಥ್ ಶಾಮನೂರು  ಟಿಕೆಟ್‌ ನೀಡಿದ್ದಕ್ಕೆ ಕಾಂಗ್ರೆಸ್ (Congress) ವಿರುದ್ದ ಅಲ್ಪಸಂಖ್ಯಾತ ನಾಯಕರು ಸಮರ ಸಾರಿದ್ದಾರೆ. 23 ಮಂದಿ ಮುಸ್ಲಿಮ್‌ ನಾಯಕರು ನಾಮಪತ್ರ ಸಲ್ಲಿಕೆ ಮಾಡುವ ಮೂಲಕ ಬಂಡಾಯದ ಬಿಸಿ ಮುಟ್ಟಿಸಿದ್ದಾರೆ.

ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ  ಕ್ಷೇತ್ರದ ಟಿಕೆಟ್‌ ನಮಗೆ ನಮ್ಮ ಸಮುದಾಯ ನಾಯಕರಿಗೆ ನೀಡಬೇಕೆಂದು ಮುಸ್ಲಿಮ್‌ ನಾಯಕರು ಪಟ್ಟು ಹಿಡಿದಿದ್ದರು. ಆದರೆ ಕಾಂಗ್ರೆಸ್‌ ಹೈಕಮಾಂಡ್‌ ಮುಸ್ಲಿಮರ ಬೇಡಿಕೆಗೆ ಸ್ಪಂದಿಸದೇ ಎಸ್‌ಎಸ್‌ ಮಲ್ಲಿಕಾರ್ಜುನ್‌ ಪುತ್ರ ಸಮರ್ಥ್‌ಗೆ ಟಿಕೆಟ್‌ ನೀಡಿದೆ.


Spread the love

About Laxminews 24x7

Check Also

ನಮಾಜ್ ಮಾಡುವ ವೇಳೆ ಹೆಜ್ಜೇನು ದಾಳಿ – ಐವರು ಗಂಭೀರ

Spread the loveದಾವಣಗೆರೆ: ರಂಜಾನ್  ಪ್ರಾರ್ಥನೆ ಮಾಡುವ ವೇಳೆ ಹೆಜ್ಜೇನು  ದಾಳಿ ನಡೆಸಿದ ಪರಿಣಾಮ ಐವರು ಗಂಭೀರ ಗಾಯಗೊಂಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ