Breaking News

ಉತ್ತರ ಕರ್ನಾಟಕಕ್ಕೆ ಅಪ್ಪಳಿಸಲಿದೆ 42° ತಾಪಮಾನ

Spread the love

ಬೆಂಗಳೂರು: ಮುಂದಿನ 1 ವಾರಗಳ ಕಾಲ ರಾಜ್ಯದ ಹವಾಮಾನದಲ್ಲಿ ಭಾರೀ ಏರುಪೇರು ಕಂಡುಬರಲಿದೆ. ಒಂದೆಡೆ ಸುಡುವ ಬಿಸಿಲು, ಒಣಹವೆ ಹಾಗೂ ಮತ್ತೊಂದೆಡೆ ಮಳೆಯ ಆರ್ಭಟ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ ಮತ್ತು ಗದಗದಲ್ಲಿ ಸೂರ್ಯನ ತಾಪ ವಿಪರೀತವಾಗಿರಲಿದೆ. ವಾರಪೂರ್ತಿ ಸುಮಾರು 42 ಡಿಗ್ರಿ ಸೆಲ್ಸಿಯಸ್ ತಾಪಮಾನದ ಎಚ್ಚರಿಕೆ ನೀಡಲಾಗಿದೆ.

ನಿನ್ನೆ ಕಲಬುರಗಿಯಲ್ಲಿ 41.6 ಡಿಗ್ರಿ ದಾಖಲಾಗಿದೆ. ಬೆಳಗಾವಿ ಹಾಗೂ ಧಾರವಾಡ ಭಾಗದಲ್ಲಿ 38 ಡಿಗ್ರಿ ಮತ್ತು ಕರಾವಳಿ ಜಿಲ್ಲೆಗಳಲ್ಲಿ 37 ಡಿಗ್ರಿಯಷ್ಟು ಬಿಸಿಲಿರಲಿದೆ. ಬೆಂಗಳೂರಿನಲ್ಲಿ ತಾಪಮಾನ 36 ಡಿಗ್ರಿ ಆಸುಪಾಸಿನಲ್ಲಿ ಇರಲಿದೆ.

ಬಿಸಿಲಿನ ನಡುವೆಯೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಲ್ಪ ಮಳೆ ಸಾಧ್ಯತೆಯೂ ಇದೆ. ಹವಾಮಾನ ಇಲಾಖೆಯು ಇಂದು ಬೆಂಗಳೂರು, ಮೈಸೂರು, ಮಂಡ್ಯ, ಹಾಸನ, ಶಿವಮೊಗ್ಗ ಸೇರಿದಂತೆ ಒಟ್ಟು 15 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.

ಮುಂದಿನ ಒಂದು ವಾರ ರಾಜ್ಯದ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮಳೆಯ ಸಮಯದಲ್ಲಿ ಸುಮಾರು 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.


Spread the love

About Laxminews 24x7

Check Also

ವ್ಯೂ ಪಾಯಿಂಟ್‌ ನಲ್ಲಿ ಸಿಡಿಲು ಬಡಿದು ನಾಲ್ವರು ವಿದ್ಯಾರ್ಥಿಗಳ ಸಾವು

Spread the loveತಿರುವನಂತಪುರಂ: ವ್ಯೂ ಪಾಯಿಂಟ್ ನಲ್ಲಿ ಸಿಡಿಲು ಬಡಿದು ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಕೇರಳದ ಮಲಪ್ಪುರಂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ