Breaking News
Home / ಜಿಲ್ಲೆ / ನಿಪ್ಪಾಣಿ ಎಪಿಎಂಸಿ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ!

ನಿಪ್ಪಾಣಿ ಎಪಿಎಂಸಿ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ!

Spread the love

ನಿಪ್ಪಾಣಿಯಲ್ಲಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭಾಗವಹಿಸಿ, ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಅಮಿತ ಸಾಳವೆ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಶ್ರೀ ರಾಯಗೌಡ ಕಲಗೌಂಡ ಕೆಳಗಿನಮಣಿ ಅವರನ್ನು ಹೂಗುಚ್ಛ ನೀಡಿ ಅಭಿನಂದಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಕೇಂದ್ರ ಹಾಗೂ ನಮ್ಮ ರಾಜ್ಯಸರ್ಕಾರ ರೈತರ ಹಿತದೃಷ್ಟಿ ಯಿಂದ ಎಪಿಎಂಸಿ ಕಾಯ್ದೆ ಜಾರಿಗೊಳಿಸಿದ್ದು, ರೈತರಿಗೆ ವರದಾನವಾಗಿದೆ ಹಾಗೂ ರೈತರಿಗೆ ಎಪಿಎಂಸಿಯಿಂದ ಉತ್ತಮ ಸೇವೆ ನೀಡುವಂತೆ ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಸಲಹೆ ನೀಡಿ. ನಾವೆಲ್ಲರೂ ಜತೆಯಾಗಿ ಎಪಿಎಂಸಿಗೆ ಬೇಕಾದ ಪೂರಕ ಯೋಜನೆಗಳನ್ನು ತರುವ ಮೂಲಕ ರೈತರ ಆರ್ಥಿಕ ಅಭಿವೃದ್ಧಿಗೆ ಶ್ರಮಿಸೋಣ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಹಶೀಲ್ದಾರರಾದ ಶ್ರೀ ಪ್ರಕಾಶ ಗಾಯಕವಾಡ, ಬಿಜೆಪಿ ನಗರಾಧ್ಯಕ್ಷರಾದ ಶ್ರೀ ಪ್ರಣವ ಮಾನವಿ, ಗ್ರಾಮೀಣ ಅಧ್ಯಕ್ಷರಾದ ಶ್ರೀ ಪವನ ಪಾಟೀಲ, ಚಿಕ್ಕೋಡಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ಜಯವಂತ ಬಾಟಲೆ, ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದ ಶ್ರೀ ಚಂದ್ರಕಾಂತ ಕೋಟಿವಾಲೆ, ಹಾಗೂ ಸದಸ್ಯರು, ಧೂಧಗಂಗಾ ಸಕ್ಕರೆ ಕಾರ್ಖಾನೆಯ ಮಾಜಿ ನಿರ್ದೇಶಕರಾದ ಶ್ರೀ ಪ್ರಕಾಶ ಪಾಟೀಲ, ಶ್ರೀ ಮಹೇಶ ಭಾತೆ, ಶ್ರೀ ಸಂಜಯ ಶಿಂತ್ರೆ, ತಾಲೂಕ ಪಂಚಾಯತ ಸದಸ್ಯರು, ಎಪಿಎಂಸಿ ಸದಸ್ಯರು, ನಗರಸಭೆ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ತಮ್ಮ ಊರುಗಳಿಗೆ ಶವಗಳನ್ನು ಒಯ್ದ ಕುಟುಂಬಸ್ಥರು

Spread the loveಕ್ರ್ಯೂಸರ್ ಪಲ್ಟಿಯಾಗಿ ಸ್ಥಳದಲ್ಲೇ 7 ಜನರ ದುರ್ಮರಣ ಪ್ರಕರಣ ಅಪಘಾತದಲ್ಲಿ ಮೃತಪಟ್ಟ 7 ಜನರ ಮರಣೋತ್ತರ ಪರೀಕ್ಷೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ